ಉರುಳಿ ಬಿದ್ದ ಮದುವೆ ಬಸ್: 30 ಜನರಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ಹೊಸದಿಗಂತ ವರದಿ ,ಕಲಬುರಗಿ:

ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕಣ್ಣಿ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ಮದುವೆಗೆ ಹೋಗಿದ್ದ ಬಸ್ ವೊಂದು ಉರುಳಿಬಿದ್ದು, 30 ಅಧಿಕ ಜನರಿಗೆ ಗಾಯಗಳಾಗಿವೆ.ಇದರ ಜೊತೆಗೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಲಾಗಿದೆ.

ಅಪಘಾತಕ್ಕೀಡಾದ ಬಸ್ಸಿನಲ್ಲಿದ್ದವರು, ಹಾವನೂರ ಗ್ರಾಮದಿಂದ ಕಲಬುರಗಿ ನಗರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ವಾಪಸ್ಸು ಹಾವನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಬಿದ್ದಿದ್ದರಿಂದ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!