ಮುಂದಿನ ತಿಂಗಳು ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಪುನರಾರಂಭ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮಾ.15ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಪುನಾರಂಭಗೊಳ್ಳಲಿದೆ.
ಈ ಮೂಲಕ ಹಿಂದಿನಂತೆ ವಿದೇಶಿ ವಿಮಾನಗಳು ನಡೆಸಬಹುದಾಗಿದೆ. ಈ ಬಗ್ಗೆ ಆರೋಗ್ಯ ಸಚಿವಾಲಯ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯ ಚರ್ಚೆ ನಡೆಸಿ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಪುನರಾರಂಭಿಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಆದರೆ ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಯದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಫೆ.14ರಂದು ಜಾರಿಗೆ ಬಂದಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲಿನ ಮಾರ್ಗಸೂಚಿಯನ್ನು ಮಾ.15ರ ಬಳಿಕವೂ ಪಾಲಿಸಬೇಕಾಗಿದೆ.
ಮಾ.23 2020ರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ಸ್ಥಗಿತಗೊಳಿಸಲಾಗುತ್ತು. ಇದರ ನಡುವೆಯೂ ವಂದೇ ಭಾರತ್‌ ಮಿಷನ್‌, ಏರ್‌ ಬಬಲ್‌ ವ್ಯವಸ್ಥೆಯ ಮೂಲಕ ವಿಶ್ವದ 40ಕ್ಕೂ ಹೆಚ್ಚು ರಾಷ್ಟ್ರಗಳ ನಡುವೆ ವಿಮಾನಗಳ ಸೇವೆ ಕಾರ್ಯಾರಂಭಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!