ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಇಂದು ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ಅಪಾರ ಹಾನಿಯಾಗಿದೆ.
ಸ್ಫೋಟದ ರಭಸಕ್ಕೆ ಆಸ್ಪತ್ರೆ ಮತ್ತು ಸಮೀಪದ ಮನೆಗಳ ಗಾಜುಗಳು ಒಡೆದಿದ್ದು, ಎರಡು ದೇಹಗಳು ತೀವ್ರವಾಗಿ ನಜ್ಜುಗುಜ್ಜಾಗಿವೆ. ಸ್ಫೋಟದಿಂದ ಕಂಗಾಲಾದ ಜನರು ರಸ್ತೆಯ ಮೇಲೆ ಮಲಗಿರುವುದನ್ನು ದೃಶ್ಯಗಳು ತೋರಿಸಿವೆ.
ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮುಘಲ್ಸರಾಯ್ ಶಾಸಕರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ವೀಕ್ಷಣೆ ನಡೆಸಿದ್ದಾರೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಮೊಘಲ್ಸರಾಯ್ ನಗರದ ರವಿ ನಗರ ಪ್ರದೇಶದಲ್ಲಿ ದಯಾಳ್ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರಕ್‌ನಿಂದ ಆಮ್ಲಜನಕ ಸಿಲಿಂಡರ್‌ಗಳನ್ನು ಇಳಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!