ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆಯೇ, ಆಕ್ಸಿಜನ್ ಕೊರತೆಯಿಂದ ಮೃತಪಡುತ್ತಿರವವರ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಇದೀ ಮತ್ತೆ ಗೋವಾದಲ್ಲಿ 15 ಜನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಅಸುನೀಗಿದ್ದಾರೆ.
ಜಿಎಂಸಿಎಚ್ನಲ್ಲಿ ಕೊರೋನಾ ರೋಗಿಗಳಿಗೆ ವೈದ್ಯಕೀಯ ಆಮ್ಲಜನಕವನ್ನು ಒದಗಿಸುವ ಆದೇಶದ ಹೊರತಾಗಿಯೂ, ಸರ್ಕಾರ ನಡೆಸುತ್ತಿರುವ ಆಸ್ಪತ್ರೆಯಲ್ಲಿ ನಿನ್ನೆ ( ಗುರುವಾರ) ಮುಂಜಾನೆ 2 ರಿಂದ 6 ಗಂಟೆಯ ಸಮಯದಲ್ಲಿ 15 ಸೋಂಕಿತರು ಮೃತಪಟ್ಟಿರುವುದನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಎರಡು ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ 26 ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು.
ಜಿಎಂಸಿಎಚ್ನಲ್ಲಿ ಕೊರೋನಾ ರೋಗಿಗಳಿಗೆ ವೈದ್ಯಕೀಯ ಆಕ್ಸಿಜನ್ ಲಭ್ಯತೆ ಅತ್ಯಂತ ಕಠಿಣವಾಗಿದೆ. ಈ ಬಗ್ಗೆ ಗಮನ ಹರಿಸುವಂತೆ ಬುಧವಾರ ಹೈಕೋರ್ಟ್ ಸೂಚಿಸಿತ್ತು. ಆದರೂ, ಮತ್ತೆ ಗುರುವಾರ ಅನಾಹುತ ನಡೆದುಹೋಗಿದೆ.
ನಿಗದಿಪಡಿಸಿದ ವೈದ್ಯಕೀಯ ಆಕ್ಸಿಜನ್ ಕೋಟಾವನ್ನು ಗೋವಾಕ್ಕೆ ಆದಷ್ಟು ಬೇಗನೆ ಲಭ್ಯವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ.