Wednesday, August 17, 2022

Latest Posts

ಆಮ್ಲಜನಕ ಅಕ್ರಮ ದಾಸ್ತಾನು: ತೋಟದ ಮನೆಯಲ್ಲಿ ಅಡಗಿದ್ದ ಉದ್ಯಮಿ ನವನೀತ್ ಕಲ್ರಾ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಆಮ್ಲಜನಕ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವನೀತ್ ಕಲ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ರಾ ಮಾಲೀಕತ್ವದ ಖಾನ್ ಚಾಚಾ, ಟೌನ್ ಹಾಲ್ ಮತ್ತು ನೇಜ್ ಆಂಡ್ ಜು ರೆಸ್ಟೋರೆಂಟ್‌ಗಳಲ್ಲಿ ಕಾನೂನು ಬಾಹಿರವಾಗಿ ಸಂಗ್ರಹಿಸಿಟ್ಟಿದ್ದ ಆಕ್ಸಿಜನ್ ಸಿಲಿಂಡರ್‌ಗಳನ್ನು ಪೊಲೀಸರು ವಶಪಡೆದುಕೊಂಡಿದ್ದರು.
ಮೇ 7ರಿಂದ ತಲೆಮರೆಸಿಕೊಂಡಿದ್ದ ಕಲ್ರಾ ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿಯೂ ಜಾಮೀನು ಸಿಗದ ಹಿನ್ನೆಲೆ ಗುರುಗ್ರಾಮದ ತೋಟದ ಮನೆಯಲ್ಲಿ ಅಡಗಿ ಕುಳಿತಿದ್ದರು.ಪೊಲೀಸರು ಕಲ್ರಾರನ್ನು ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!