Sunday, August 14, 2022

Latest Posts

ಮಂಡ್ಯದಲ್ಲಿ ಆಕ್ಸಿಜನ್ ಘಟಕ ಶೀಘ್ರ ಆರಂಭ: ಡಾ.ಕೆ.ಸಿ ನಾರಾಯಣ ಗೌಡ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಡ್ಯ:

ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮಂಡ್ಯದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಸರ್ಕಾರದಿಂದ ಅನುಮತಿ ನೀಡಿದ್ದು, ಶೀಘ್ರದಲ್ಲಿ ಆಕ್ಸಿಜನ್ ಘಟಕ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಹೇಳಿದರು.
ಮಂಡ್ಯದ ಮಿಮ್ಸ್ ಬಳಿ ಆಕ್ಸಿಜನ್ ಪ್ಲಾಂಟ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಮಂಡ್ಯ ಹಾಗೂ ಮಳವಳ್ಳಿ ನಲ್ಲಿ ಆಕ್ಸಿಜನ್ ಪ್ಲಾಂಟ್ ಗೆ ಅವಕಾಶ ನೀಡಿದೆ ಎಂದರು.
ಇಷ್ಟು ದಿನ ಬೇರೆ ಕಡೆಯಿಂದ ಆಕ್ಸಿಜನ್ ತರಿಸಿಕೊಳ್ತಿದ್ದೆವು ಮುಂದೆ ಈ ಸಮಸ್ಯೆ ಸಂಭವಿಸುವುದಿಲ್ಲ, ಈ ನಿಟ್ಟಿನಲ್ಲಿ ನಮ್ಮ ಪ್ರತಿ ತಾಲ್ಲೂಕಿನಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣವಾಗಬೇಕು ಎಂದರು.
ಆಕ್ಸಿಜನ್ ಸಮಸ್ಯೆಗಳ ಸರಿದೂಗಿಸಲು, ಆಕ್ಸಿಜನ್ ಬೆಡ್ ಸಮಸ್ಯೆ ಸರಿಪಡಿಸಲು ಬಸ್ ನಲ್ಲಿ 6 ರಿಂದ 8 ಜನಕ್ಕೆ ಆಕ್ಸಿಜನ್ ಕೊಡುವ ಹೊಸ ಪ್ಲಾನ್ ಮಾಡಲಾಗುತ್ತಿದೆ ಎಂದರು.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಈಗಾಗಲೇ ಚಾಲನೆ ನೀಡಿದ್ದು, ಇದನ್ನು ಜಿಲ್ಲೆಯಲ್ಲಿ ಜಾರಿಗೆ ತರಲು ಸಿಎಂ ಜೊತೆ ಮಾತನಾಡಿ ಮನವಿ ಮಾಡಲಾಗಿದೆ ಶೀಘ್ರವಾಗಿ ಈ ಯೋಜನೆ ಜಾರಿಗೆ ಬರುತ್ತದೆ ಎಂದರು.
ಎಲ್ಲಾರು ಸಹ ಕಡ್ಡಾಯವಾಗಿ ಕೊರೊನಾ ನಿಯಮ ಪಾಲನೆ ಮಾಡಿ ಎಂದು ಮನವಿ ಮಾಡಿದರು.
ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಮಂಜು, ಮಿಮ್ಸ್ ನಿರ್ದೇಶಕ ಡಾ.ಹರೀಶ್ ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss