ಪಿ.ಎಸ್.ಐ. ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸೇರಿದಂತೆ 26 ಜನರಿಗೆ ಜಾಮೀನು

ಹೊಸದಿಗಂತ ವರದಿ ಕಲಬುರಗಿ: 

ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾಗಿ ಜೈಲು ಸೇರಿದ್ದ 26 ಜನ ಆರೋಪಿಗಳಿಗೆ ಜಿಲ್ಲಾ ನ್ಯಾಯಲಯದ ನ್ಯಾಯಾಧೀಶರು ಗುರುವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿದಂತೆ ಒಟ್ಟು 26 ಜನರಿಗೆ ಜಾಮೀನು ಲಭಿಸಿದೆ.

ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧಿಶರಾದ ಕೆ.ಬಿ. ಪಾಟೀಲ್ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ನ್ಯಾಯಲಯವು ಶರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!