ಬಾಗಲಕೋಟೆ ನೂತನ ಜಿಲ್ಲಾಧಿಕಾರಿಯಾಗಿ ಪಿ.ಸುನೀಲ್‍ಕುಮಾರ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ ಬಾಗಲಕೋಟೆ:

ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2011ರ ಐ.ಎ.ಎಸ್ ಬ್ಯಾಚ್‍ನ ಪಿ.ಸುನೀಲಕುಮಾರ ಅವರು ಪ್ರಭಾರದಲ್ಲಿದ್ದ ಸಿಇಓ ಟಿ.ಭೂಬಾಲನ್ ಅವರಿಂದ ಶನಿವಾರ ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ಹುದ್ದೆ ಸ್ವೀಕರಿಸಿರುವ ಪಿ.ಸುನೀಲ್‍ಕುಮಾರ ಅವರು ಮೂಲತಃ ಆಂಧ್ರಪ್ರದೇಶ ರಾಜ್ಯದವರಾಗಿದ್ದು, ವರಂಗಲ್‍ನ ನ್ಯಾಷನಲ್ ಇಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‍ಐಟಿ) ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವೀಧರರಾಗಿದ್ದಾರೆ. ವಿದ್ಯಾಭ್ಯಾಸ ಬಳಿಕ 2002 ರಿಂದ 2009 ವರೆಗೆ ಟಾಟಾ ಕನ್‍ಸಲ್ಟಂಟ್ ಸಾಫ್ಟ್‌ವೇರ್ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ 2 ವರ್ಷ ಭಾರತ ಮತ್ತು 5 ವರ್ಷ ವಿದೇಶದಲ್ಲಿ ಸೇವೆ ಸಲ್ಲಿಸಿದ್ದಾರೆ.

ವಿದೇಶ ಸೇವೆಯ ನಂತರ ಭಾರತಕ್ಕೆ ಮರಳಿ ಯುಪಿಎಸ್‍ಸಿ ಪರೀಕ್ಷೆ ಬರೆದು 2011ರಲ್ಲಿ ಐ.ಎ.ಎಸ್ ತೇರ್ಗಡೆಹೊಂದಿರುತ್ತಾರೆ. ನಂತರ ಹಾಸನದಲ್ಲಿ 2 ವರ್ಷ ಪ್ರೊಬೇಷನರಿ ಅವಧಿ ಮುಗಿಸಿ, ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಯಾದಗಿರಿ ಜಿಲ್ಲೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, 4 ವರ್ಷ ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ, ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸಿ, ಕೊಪ್ಪಳ ಜಿಲ್ಲಾಧಿಕಾರಿಯಾಗಿ ಬಳಿಕ ವಿಜಯಪುರ ಜಿಲ್ಲಾಧಿಕಾರಿಯಾಗಿ ಕೂಡಾ ಸೇವೆ ಸಲ್ಲಿಸಿ ಈಗ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿ ಶ್ರಮಿಸುವುದಾಗಿ ತಿಳಿಸಿದ ಅವರು ಮೊದಲು ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಮೂವರು ಐ.ಎ.ಎಸ್ ಅಧಿಕಾರಿಗಳಾಗಿದ್ದ ಜಿ.ಪಂ ಸಿಇಓ ಟಿ.ಭೂಬಾಲನ್, ಯುಕೆಪಿಯ ಮಹಾ ವ್ಯವಸ್ಥಾಪಕ ಲೋಖಂಡೆ, ಬಾಗಲಕೋಟೆ ಜಿಲ್ಲೆ ಅಭಿವೃದ್ದಿ ಪಥದತ್ತ ಸಾಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!