ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಸವಣ್ಣನವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಂಸದೆ ಮಂಗಳ ಸುರೇಶ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸಂಸತ್​​ ಮುಂಗಾರು ಅಧಿವೇಶನದಲ್ಲಿ ಹದನೇಳನೇ ಲೋಕಸಭಾ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿಗೆದ್ದ ಬಿಜೆಪಿ ಸಂಸದೆ ಮಂಗಳ ಸುರೇಶ್​​ ಅಂಗಡಿಯವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು.
ಮೊದಲ ಬಾರಿಗೆ ಲೋಕಸಭೆ ಪ್ರವೇಶ ಮಾಡಿದ ಮಂಗಳ ಅಂಗಡಿಯವರು ಬಸವಣ್ಣನವರ ಹೆಸರಿನಲ್ಲಿ ಪ್ರಮಾಣವಚನ ಪಡೆದುಕೊಂಡರು.
ಬೆಳಗಾವಿ ಬೈ ಎಲೆಕ್ಷನ್​ನಲ್ಲಿ ಬಿಜೆಪಿ​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಂಗಳಾ ಅಂಗಡಿ 3,986 ಮತಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದ್ದರು. 4,36,868 ಮತಗಳನ್ನು ಪಡೆಯುವ ಮೂಲಕ ಮಂಗಳಾ ಅಂಗಡಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಿದ್ದರು. ಸತೀಶ್ ಜಾರಕಿಹೊಳಿ 4,32,882 ಮತಗಳನ್ನು ಪಡೆದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss