ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಪಾದಯಾತ್ರೆ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅರಸೀಕರೆಯಿಂದ ತುಮಕೂರುವರೆಗೆ ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ.ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಮೀನಾಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಹಾಸನ, ತುಮಕೂರು ಸೇರಿ ಹನ್ನೆರಡು, ಹದಿಮೂರು ಜಿಲ್ಲೆಗಳಲ್ಲಿ ಬೆಳೆಯುವ ಕೊಬರಿ ಬೆಲೆ ಶೇ.50ರಷ್ಟು ಕುಸಿದಿದೆ. ಕಳೆದ ಒಂದು ವರ್ಷದಿಂದ ಏಳೂವರೆ, ಎಂಟೂವರೆ ಸಾವಿರ ದರವನ್ನು ಮಾರುಕಟ್ಟೆಯಲ್ಲಿ ಕಾಣುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ತೆಂಗು ಬೆಳೆಗಾರರು ಖರ್ಚು ವೆಚ್ಚ ಏನಿದೆ, ಅದಕ್ಕೆ ಸರಕಾರ ಮಧ್ಯಸ್ಥಿಕೆ ವಹಿಸಿ ಆರ್ಥಿಕ ನೆರವು ಕೊಡಲು ಒತ್ತಾಯ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಚರ್ಚೆ ನಡೆದಾಗ ಕಾಂಗ್ರೆಸ್‌ನ ಸದಸ್ಯರು ಕೇಂದ್ರ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಒತ್ತಡ ತರಬೇಕು ಎಂದು ಹೇಳುತ್ತಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ಪಾದಯಾತ್ರೆ ಆರಂಭಿಸುವುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!