August 19, 2026
Wednesday, August 19, 2026
spot_img

ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಅವರು ಹೃದಯ ಸಂಬಂಧಿ ಸಮಸ್ಯೆಗೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಭಾರಧ್ವಜ್, ದೇಶದಾದ್ಯಂತ 140 ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಅವರು ತೂಗು ಸೇತುವೆಗಳ ಸರದಾರ ಎಂದು ಹೆಸರು ಮಾಡಿದ್ದರು. ಅವರ ವಸಾಧನೆ ಗುರುತಿಸಿ 2017ರಲ್ಲಿ ಅವರಿಗೆ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇಂಜಿನಿಯರ್ ಪದವಿ ಪಡೆದ ಬಳಿಕ ಆಯಶ್ಯಿಲ್ಪ:

ಇಂಜಿನಿಯರಿಂಗ್ ವರ್ಕ್ಸ್ ಆರಂಭಿಸಿದ್ದ ಭಾರದ್ವಾಜ್ ಅವರು ಬಳಿಕ ತೂಗುಸೇತುವೆ ನಿರ್ಮಾಣ ಆರಂಭಿಸಿ ದೇಶ ವಿದೇಶಗಳಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಪ್ರಸಿದ್ಧರಾಗಿದ್ದರು. ಪತ್ನಿ ದಿ.ಉಷಾ. ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರು ಪುತ್ರರಾದ ಸುದರ್ಶನ್, ಪತಂಜಲಿ, ಪುತ್ರಿ ರಸ್ಯಾ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !