ಪದ್ಮಪ್ರಿಯ ಸಾವು ಪ್ರಕರಣ: ನಕಲಿ ದಾಖಲೆ ಸೃಷ್ಟಿ ಆರೋಪದಿಂದ ಅತುಲ್ ರಾವ್ ಖುಲಾಸೆ

ಹೊಸದಿಗಂತ, ಮಂಗಳೂರು:

ಭಾರೀ ತಲ್ಲಣ ಮೂಡಿಸಿದ್ದ ಮಾಜಿ ಶಾಸಕ ಕೆ. ರಘುಪತಿ ಭಟ್‌ರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿ ಆರೋಪ ಎದುರಿಸುತ್ತಿದ್ದ ಅತುಲ್ ರಾವ್‌ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿದೆ.

ಬರೋಬ್ಬರಿ 15 ವರ್ಷಗಳ ಹಿಂದಿನ ಪ್ರಕರಣ ಇದಾಗಿದೆ. 2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅವರನ್ನು ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಸೃಷ್ಟಿಸಿ ಅಪಹರಣದ ನಾಟಕ ಮಾಡಿದ್ದಾರೆ ಎಂಬ ನಕಲಿ ದಾಖಲೆ ಸೃಷ್ಟಿಸಿದ ಆರೋಪ ಅತುಲ್ ಮೇಲಿತ್ತು.

ಈ ಬಗ್ಗೆ 2008ರ ಜೂ.19ರಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯ, 2023ರ ನ.10ರಂದು ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿತ್ತು.

ಇದರ ವಿರುದ್ಧ ಅತುಲ್ ಡಿಸೆಂಬರ್ ತಿಂಗಳಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!