July 22, 2026
Wednesday, July 22, 2026
spot_img
Home Blog Page 4

ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾ*ಚಾರ ಕೇಸ್‌ಗೆ ಟ್ವಿಸ್ಟ್‌: ಒಪ್ಪಿಗೆಯಿಂದಲೇ ಬಂದಿದ್ರು ಎಂದ ಆರೋಪಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆಗೆ ಹೊಸ ಟ್ವಿಸ್ಟ್‌ ಸಿಕ್ಕಿದೆ.

ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಯುವತಿಯನ್ನು ಮೂವರು ಖದೀಮರು ಅಪಹರಿಸಿದ್ದು, ಬಳಿಕ ಚಾಮರಾಜನಗರ ತಾಲೂಕಿನ ಸಂತೆಮರಳ್ಳಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರ ಸ್ಟೇಟ್‌ಮೆಂಟ್‌ ಬೇರೆ ರೀತಿಯೇ ಇದೆ!

ಮಹಿಳೆ ಒಪ್ಪಿಗೆಯಿಂದಲೇ ನಮ್ಮ ಜೊತೆ ಬಂದಿದ್ದಾರೆ. ನಾವು ಕಿಡ್ನಾಪ್‌ ಮಾಡಿಲ್ಲ. ಲಾಡ್ಜ್‌ನಲ್ಲಿ ವಿಡಿಯೋ ಮಾಡುವ ವಿಚಾರಕ್ಕೆ ನಮ್ಮ ಮಧ್ಯೆ ಗಲಾಟೆ ಆಗಿತ್ತು. ಆಗ ನಾವು ಮಹಿಳೆಯನ್ನು ಅದೇ ಬಸ್‌ಸ್ಟಾಂಡ್‌ಗೆ ವಾಪಾಸ್‌ ಬಿಟ್ಟು ಬಂದೆವು. ಸಿಟ್ಟಿನಲ್ಲಿ ನಮ್ಮ ವಿರುದ್ಧ ಅತ್ಯಾಚಾರದ ದೂರು ನೀಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಕರಣದ ಸತ್ಯಾಸತ್ಯತೆಗಳನ್ನು ತಿಳಿಯಲು ಸಂತ್ರಸ್ತೆಯ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ ಮತ್ತು ಆರೋಪಿಗಳ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ತಿರುಪತಿಯಲ್ಲಿ ಭಕ್ತರ ಹಸಿವು ನೀಗಿಸಲು ಹೈಟೆಕ್ ವ್ಯವಸ್ಥೆ: TTDಯಿಂದ ಹೊಸ ಪ್ರಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಮಲಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಹೊಸ ತಂತ್ರಜ್ಞಾನ ವ್ಯವಸ್ಥೆಯನ್ನು ಪರಿಚಯಿಸಿದೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ತ್ವರಿತವಾಗಿ ಆಹಾರ ಮತ್ತು ಪಾನೀಯ ತಲುಪಿಸಲು ‘ಫುಡ್ ಸರ್ವಿಂಗ್ ಕನ್ವೇಯರ್ ಸಿಸ್ಟಮ್’ ಅನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ.

3.5 ಕಿ.ಮೀ. ಸಾಲಿನಲ್ಲಿ ಅನ್ನಪ್ರಸಾದ ವಿತರಣೆ

ಪ್ರತಿದಿನ ಲಕ್ಷಕ್ಕೂ ಹೆಚ್ಚು ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಸಾಲಿನಲ್ಲಿ ನಿಲ್ಲುತ್ತಾರೆ. ಈ ಭಕ್ತರಿಗೆ ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ಹಾಲು, ಮಜ್ಜಿಗೆ, ನೀರು, ಉಪ್ಮಾ, ಸಾಂಬಾರ್ ಅನ್ನ ಹಾಗೂ ಟೊಮೆಟೊ ಭಾತ್ ಸೇರಿದಂತೆ ವಿವಿಧ ಪ್ರಸಾದಗಳನ್ನು ವಿತರಿಸಲಾಗುತ್ತಿದೆ.

ಇದನ್ನೂ ಓದಿ:

ಗೇಟ್ 45ರಲ್ಲಿ ಹೈಟೆಕ್ ಪ್ರಯೋಗ

ಮಾನವ ಶ್ರಮ ಕಡಿಮೆ ಮಾಡಿ ಆಹಾರ ವಿತರಣೆಯನ್ನು ವೇಗಗೊಳಿಸುವ ಉದ್ದೇಶದಿಂದ ಶಿಲಾ ತೋರಣಂ ಬಳಿಯ ಗೇಟ್ 45ರಲ್ಲಿ ಕನ್ವೇಯರ್ ವ್ಯವಸ್ಥೆಯನ್ನು ಪರೀಕ್ಷಿಸಲಾಗುತ್ತಿದೆ. ಶ್ರೀವಾರಿ ಸೇವಕರು ಈ ಯಂತ್ರದ ಮೂಲಕ ಭಕ್ತರಿಗೆ ಸುಲಭವಾಗಿ ಆಹಾರ ತಲುಪಿಸುತ್ತಿದ್ದಾರೆ.

3.50 ಲಕ್ಷ ರೂ. ವೆಚ್ಚದ ಯೋಜನೆ

ದಾನಿಗಳ ಸಹಕಾರದಿಂದ ಸುಮಾರು 3.50 ಲಕ್ಷ ರೂ. ವೆಚ್ಚದಲ್ಲಿ ಈ ವ್ಯವಸ್ಥೆ ನಿರ್ಮಿಸಲಾಗಿದೆ. ಪ್ರಯೋಗ ಯಶಸ್ವಿಯಾದರೆ ಸರತಿ ಸಾಲಿನ ಇತರ ಪ್ರದೇಶಗಳಿಗೂ ಈ ತಂತ್ರಜ್ಞಾನ ವಿಸ್ತರಿಸಲು TTD ಯೋಜನೆ ರೂಪಿಸಿದೆ.

ಇನ್ಮುಂದೆ ಶಾಲೆ, ಆಸ್ಪತ್ರೆ ಆವರಣಗಳಲ್ಲಿ ಜಂಕ್ ಫುಡ್ ನಿಷೇಧಕ್ಕೆ ಸರ್ಕಾರ ಸಿದ್ಧ?

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಾಲೆ ಹಾಗೂ ಆಸ್ಪತ್ರೆಯ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ಮಾರಾಟ ನಿಷೇಧ ಮಾಡುವ ಬಗ್ಗೆ ಸರ್ಕಾರ ಚಿಂತಿಸುತ್ತಿದ್ದು, ಈ ಪ್ರಸ್ತಾಪವನ್ನು ಆರೋಗ್ಯ ತಜ್ಞರು ಸ್ವಾಗತಿಸಿದ್ದಾರೆ.

ಶಾಲೆಗಳ ಆವರಣ ಹಾಗೂ ಆಸ್ಪತ್ರೆಗಳ ಆವರಣದಲ್ಲಿ ಜಂಕ್ ಫುಡ್ ಮಾರಾಟ ಅತಿರೇಕವಾಗಿ ನಡೆಯುತ್ತಿದೆ. ಇದರಿಂದ ಮಕ್ಕಳು ಹಾಗೂ ಸಾರ್ವಜನಿಕರು ಬಹು ಬೇಗ ರೋಗಗ್ರಸ್ತರಾಗುತ್ತಿದ್ದಾರೆ. ಪಿಜ್ಜಾ, ಬರ್ಗರ್ ಹಾಗೂ ಕಾರ್ಬೋನೇಟೆಡ್ ಪಾನೀಯಗಳನ್ನ ಮಾರಾಟ ಮಾಡಲು ಅವಕಾಶ ಇಲ್ಲದಿದ್ದರೂ, ಬಹು ದೊಡ್ಡ ಪ್ರಮಾಣದಲ್ಲಿ ಇವು ಮಾರಾಟವಾಗುತ್ತಿವೆ. ಆದ್ದರಿಂದ ಸಣ್ಣ ವಯಸಲ್ಲೇ ಮಕ್ಕಳು ಕ್ಯಾನ್ಸರ್ ಹಾಗೂ ಮೂತ್ರ ಪಿಂಡದ ಸಮಸ್ಯೆಗೆ ಒಳಗಾಗುತ್ತಿದ್ದಾರೆ.

ಆದರೆ ಇದರ ಜೊತೆಗೆ ಆಹಾರ ಪದ್ಧತಿಯಲ್ಲಿ ಶಾಶ್ವತ ಬದಲಾವಣೆಗಳನ್ನು ತರಲು ಬಲವಾದ ನಿಯಮಗಳು, ಪೌಷ್ಟಿಕಾಂಶ ಕುರಿತ ಶಿಕ್ಷಣದ ಪರಿಣಾಮಕಾರಿ ನೀತಿ ಜಾರಿಯೊಂದಿಗೆ ಈ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಎಚ್ಚರಿಸಿದ್ದಾರೆ.

ಒಂದರಿಂದ ಹತ್ತನೇ ತರಗತಿಯವರೆಗೂ ವಿದ್ಯಾರ್ಥಿಗಳಿಗೆ ಆಹಾರ ಒದಗಿಸುವ ಶಾಲೆಗಳ ಸುತ್ತಲೂ ಜಂಕ್ ಫುಡ್ ಮಾರಾಟವನ್ನು ನಿರ್ಬಂಧಿಸಬೇಕು ಎಂದು ಹೇಳಲಾಗಿದೆ.ಮಕ್ಕಳು ತಮ್ಮ ದಿನದ ಹೆಚ್ಚಿನ ಸಮಯವನ್ನು ಶಾಲೆಗಳಲ್ಲಿ ಕಳೆಯುತ್ತಾರೆ ಮತ್ತು ಆಗಾಗ್ಗೆ ಕ್ಯಾಂಪಸ್‌ನಲ್ಲಿ ಊಟಗಳನ್ನು ಸೇವಿಸುತ್ತಾರೆ, ಆದ್ದರಿಂದ ಶಾಲೆಗಳು ಸಾರ್ವಜನಿಕ ಆರೋಗ್ಯ ಮಧ್ಯಸ್ಥಿಕೆಗಳಿಗೆ ಪ್ರಮುಖ ಸೆಟ್ಟಿಂಗ್‌ಗಳಲ್ಲಿ ಒಂದಾಗಿದೆ. ಸಕ್ಕರೆ, ಎಣ್ಣೆ, ಉಪ್ಪು ಹಾಗೂ ಮೈದಾ ಪದಾರ್ಥಗಳನ್ನು ಮಕ್ಕಳು ತಿನ್ನುವುದನ್ನು ಕಡಿಮೆ ಮಾಡಬೇಕು ಎನ್ನುವ ಉದ್ದೇಶದಿಂದ ಪ್ರಸ್ತಾವನೆ ನೀಡಲಾಗಿದೆ.

Beauty Tips | ಮುಖದ ಹೊಳಪಿಗೆ ಆಹಾರವೇ ಮದ್ದು: ಗ್ಲೋಯಿಂಗ್ ಸ್ಕಿನ್‌ ಸೀಕ್ರೆಟ್ ಈ ಗ್ಲುಟನ್-ಫ್ರೀ ಫುಡ್

ಕಾಂತಿಯುತ ಮತ್ತು ಆರೋಗ್ಯಕರ ತ್ವಚೆ ಪಡೆಯಲು ಕೇವಲ ದುಬಾರಿ ಸ್ಕಿನ್ ಕೇರ್ ಉತ್ಪನ್ನಗಳನ್ನೇ ಅವಲಂಬಿಸಬೇಕಿಲ್ಲ. ನಮ್ಮ ದೈನಂದಿನ ಆಹಾರ ಪದ್ಧತಿಯೂ ತ್ವಚೆಯ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.

ದೇಹದ ಒಳಗಿನ ಆರೋಗ್ಯ ಉತ್ತಮವಾಗಿದ್ದರೆ ಅದರ ಪ್ರತಿಫಲ ಮುಖದ ಮೇಲೂ ಕಾಣಿಸುತ್ತದೆ. ಈ ನಿಟ್ಟಿನಲ್ಲಿ ಕೆಲವರಿಗೆ ಗ್ಲುಟನ್-ಮುಕ್ತ (Gluten-Free) ಆಹಾರ ಪದ್ಧತಿ ತ್ವಚೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು.

Gluten-Free ಆಹಾರ ಎಂದರೇನು?

ಗೋಧಿ, ಬಾರ್ಲಿ,ಅಕ್ಕಿ ಮುಂತಾದ ಧಾನ್ಯಗಳಲ್ಲಿ ಕಂಡುಬರುವ ಪ್ರೋಟೀನ್ ಅನ್ನು ಗ್ಲುಟನ್ ಎಂದು ಕರೆಯಲಾಗುತ್ತದೆ. ಗ್ಲುಟನ್‌ಗೆ ಸೂಕ್ಷ್ಮತೆ ಇರುವವರಿಗೆ ಇದರಿಂದ ಉಬ್ಬರ, ಜೀರ್ಣಕ್ರಿಯೆ ಸಮಸ್ಯೆ ಹಾಗೂ ಕೆಲವೊಮ್ಮೆ ತ್ವಚೆಯ ಸಮಸ್ಯೆಗಳೂ ಕಾಣಿಸಬಹುದು. ಇಂತಹವರು ಗ್ಲುಟನ್ ಕಡಿಮೆ ಇರುವ ಆಹಾರ ಸೇವಿಸಿದಾಗ ದೇಹದಲ್ಲಿ ಉತ್ತಮ ಬದಲಾವಣೆಗಳನ್ನು ಗಮನಿಸಬಹುದು.

ಹಣ್ಣುಗಳು ಮತ್ತು ತರಕಾರಿಗಳು

ಬೆರ್ರಿ ಹಣ್ಣುಗಳು, ಕಿತ್ತಳೆ, ಸೇಬು, ಕ್ಯಾರೆಟ್, ಬೀಟ್ರೂಟ್, ಪಾಲಕ್ ಮುಂತಾದವುಗಳಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿದ್ದು, ತ್ವಚೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ.

ನಟ್ಸ್ ಮತ್ತು ಬೀಜಗಳು

ಬಾದಾಮಿ, ವಾಲ್‌ನಟ್, ಚಿಯಾ ಬೀಜ, ಫ್ಲ್ಯಾಕ್ಸ್ ಸೀಡ್ಸ್‌ಗಳಲ್ಲಿ ಉತ್ತಮ ಕೊಬ್ಬು ಹಾಗೂ ವಿಟಮಿನ್‌ಗಳು ಇರುತ್ತವೆ. ಇವು ತ್ವಚೆಯ ತೇವಾಂಶ ಕಾಪಾಡಲು ನೆರವಾಗುತ್ತವೆ.

ಇದನ್ನೂ ಓದಿ:

ಸಿರಿಧಾನ್ಯಗಳು (Millets)

ರಾಗಿ, ಜೋಳ, ನವಣೆ, ಸಜ್ಜೆ ಮುಂತಾದ ಸಿರಿಧಾನ್ಯಗಳು ಗ್ಲುಟನ್-ಮುಕ್ತವಾಗಿದ್ದು, ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ.

ಪ್ರೋಟೀನ್‌ ಸಮೃದ್ಧ ಆಹಾರ

ಮೊಟ್ಟೆ, ಬೇಳೆಕಾಳುಗಳು, ಪನೀರ್, ಮೊಸರು ಮುಂತಾದ ಪ್ರೋಟೀನ್ ಮೂಲಗಳು ತ್ವಚೆಯ ಕೋಶಗಳ ಪುನರ್ ನಿರ್ಮಾಣಕ್ಕೆ ಸಹಾಯ ಮಾಡುತ್ತವೆ.

ಸಾಕಷ್ಟು ನೀರು ಸೇವನೆ

ಯಾವುದೇ ಆಹಾರ ಪದ್ಧತಿಯ ಜೊತೆಗೆ ದೇಹವನ್ನು ಹೈಡ್ರೇಟ್ ಆಗಿಡುವುದು ಮುಖ್ಯ. ಸಾಕಷ್ಟು ನೀರು ಕುಡಿಯುವುದರಿಂದ ತ್ವಚೆಯ ನೈಸರ್ಗಿಕ ಹೊಳಪು ಹೆಚ್ಚಾಗುತ್ತದೆ.

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್‌ ಸ್ಪ್ರೇ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರನೆ ಜಾರಿಯಲ್ಲಿದೆ. ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ಮಾಡಲು ಪ್ರಯತ್ನಿಸಲಾಯಿತು ಎಂದು ಪಾಲಿಕೆ ಸಿಬ್ಬಂದಿ ತಿಳಿಸಿದ್ದಾರೆ. ಅಲ್ಲದೆ, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಯಿತು ಎಂದೂ ಅವರು ಆರೋಪಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿದರು. ಹಲ್ಲೆ ಯತ್ನದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಉದ್ವಿಗ್ನ ಪರಿಸ್ಥಿತಿಯಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಪಾಲಿಕೆ ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿದ್ದಾರೆ.

ಒಂದೊಳ್ಳೆ ಕೆಂಪು ಮಸಾಲೆಯ ಮೀನಿನ ಫ್ರೈ ತಿನ್ಬೇಕಾ? ಮಾಡೋದು ಇಷ್ಟು ಸಿಂಪಲ್‌ ನೋಡಿ

0

ಸಾಮಾಗ್ರಿಗಳು
ಒಣಮೆಣಸಿನಕಾಯಿ
ಬೆಳ್ಳುಳ್ಳಿ
ಶುಂಠಿ
ಚಕ್ಕೆ
ಲವಂಗ
ಪುದೀನಾ
ಉಪ್ಪು
ಕಾರ್ನ್‌ಫ್ಲೋರ್‌
ಎಣ್ಣೆ

ಮಾಡುವ ವಿಧಾನ
ಮೊದಲು ಒಣಮೆಣಸಿನಕಾಯಿ, ಬೆಳ್ಳುಳ್ಳಿ, ಶುಂಠಿ, ಚಕ್ಕೆ,ಪುದೀನಾ, ಉಪ್ಪು ಹಾಕಿ ಮಿಕ್ಸಿ ಮಾಡಿ ಇಡಿ
ಆನಂತರ ಆ ಮಿಶ್ರಣಕ್ಕೆ ಹುಣಸೆಹುಳಿ, ಕಾರ್ನ್‌ಫ್ಲೋರ್‌ ಹಾಕಿ
ನಂತರ ಮೀನಿಗೆ ಹಚ್ಚಿ ಮ್ಯಾರಿನೇಟ್‌ ಮಾಡಿ ಇಡಿ
ಒಂದೆರಡು ಗಂಟೆಗಳ ನಂತರ ತವಾಗೆ ಕೊಬ್ಬರಿ ಎಣ್ಣೆ ಹಾಕಿ ಬೇಯಿಸಿದ್ರೆ ಮೀನು ಫ್ರೈ ರೆಡಿ

‘ದಿ ಹಂಡ್ರೆಡ್’ ಅಖಾಡಕ್ಕೆ ಸ್ಮೃತಿ ಎಂಟ್ರಿ: ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಹೊಸ ಇನ್ನಿಂಗ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಕ್ರಿಕೆಟ್‌ನ ರೋಚಕ ಲೀಗ್‌ಗಳಲ್ಲಿ ಒಂದಾದ ‘ದಿ ಹಂಡ್ರೆಡ್ ವುಮೆನ್ಸ್’ ಮತ್ತೆ ಕಣಕ್ಕಿಳಿಯಲು ಸಿದ್ಧವಾಗಿದೆ. ಟೂರ್ನಿಯ ಆರಂಭದಲ್ಲೇ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ತಂಡದೊಂದಿಗೆ ಗಮನ ಸೆಳೆದಿದ್ದು, ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಅವರ ಪ್ರದರ್ಶನದ ಮೇಲೆ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಹೆಚ್ಚಾಗಿದೆ

ಮ್ಯಾಂಚೆಸ್ಟರ್ ತಂಡಕ್ಕೆ ಸ್ಮೃತಿ ಸೇರ್ಪಡೆ

ಕಳೆದ ಆವೃತ್ತಿಯಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಸ್ಮೃತಿ ವೈಯಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದೀಗ ನೇರ ಒಪ್ಪಂದದ ಮೂಲಕ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ.

ಸ್ಟಾರ್ ಆಟಗಾರ್ತಿಯರ ಬಲ

ಸ್ಮೃತಿ ಮಂಧಾನ ಜೊತೆಗೆ ಆಸ್ಟ್ರೇಲಿಯಾದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್, ಇಂಗ್ಲೆಂಡ್‌ನ ಪ್ರಮುಖ ಸ್ಪಿನ್ನರ್ ಸೋಫಿ ಎಕ್ಲಿಸ್ಟೋನ್ ಹಾಗೂ ಭಾರತದ ವಿಕೆಟ್ ಕೀಪರ್-ಬ್ಯಾಟರ್ ರಿಚಾ ಘೋಷ್ ತಂಡದಲ್ಲಿದ್ದಾರೆ. ಹೀಗಾಗಿ ತಂಡದಲ್ಲಿ ಅನುಭವ ಮತ್ತು ಯುವಶಕ್ತಿಯ ಉತ್ತಮ ಸಂಯೋಜನೆ ಕಾಣಿಸುತ್ತಿದೆ.

ಇದನ್ನೂ ಓದಿ:

ಫ್ರಾಂಚೈಸಿಗೆ ಹೊಸ ಹೆಸರು

ಐಪಿಎಲ್‌ನ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರಾದ ಆರ್‌ಪಿಎಸ್‌ಜಿ ಗ್ರೂಪ್ ಮ್ಯಾಂಚೆಸ್ಟರ್ ಫ್ರಾಂಚೈಸಿಯಲ್ಲಿ ಹೂಡಿಕೆ ಮಾಡಿದ್ದು, ಇದರ ಬಳಿಕ ತಂಡದ ಹೆಸರನ್ನು ಮ್ಯಾಂಚೆಸ್ಟರ್ ಒರಿಜಿನಲ್ಸ್‌ನಿಂದ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಎಂದು ಬದಲಾಯಿಸಲಾಗಿದೆ.

ದಿ ಹಂಡ್ರೆಡ್‌ನಲ್ಲಿ ಸ್ಮೃತಿಯ ದಾಖಲೆ

ಈ ಟೂರ್ನಿಯಲ್ಲಿ ಸ್ಮೃತಿ ಈಗಾಗಲೇ ವಿಶೇಷ ದಾಖಲೆ ಹೊಂದಿದ್ದಾರೆ. ‘ದಿ ಹಂಡ್ರೆಡ್’ ಇತಿಹಾಸದಲ್ಲಿ ಅತಿ ವೇಗವಾಗಿ 500 ರನ್ ಪೂರೈಸಿದ ಆಟಗಾರ್ತಿ ಎಂಬ ಹೆಗ್ಗಳಿಕೆ ಅವರದ್ದಾಗಿದೆ. ಅವರು 29 ಇನ್ನಿಂಗ್ಸ್‌ಗಳಲ್ಲಿ 676 ರನ್ ಗಳಿಸಿದ್ದು, 139.09ರ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಇದೀಗ ಸೋಫಿ ಎಕ್ಲಿಸ್ಟೋನ್ ನಾಯಕತ್ವದ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಸ್ಮೃತಿ ಮಂಧಾನ ಹೊಸ ಸವಾಲಿಗೆ ಸಿದ್ಧರಾಗಿದ್ದಾರೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಕಿಚ್ಚು: ರೈತರ ಹೋರಾಟ, ಶಂಭು ಗಡಿ ಸೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ–ಅಮೆರಿಕ ಪ್ರಸ್ತಾವಿತ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ರೈತ ಸಂಘಟನೆಗಳು ದೆಹಲಿಯ ಕಿಸಾನ್ ಘಾಟ್‌ನಲ್ಲಿ ಆಯೋಜಿಸಿರುವ ಮಹಾಪಂಚಾಯತ್ ಹಿನ್ನೆಲೆಯಲ್ಲಿ ಹರಿಯಾಣ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಹರಿಯಾಣ–ಪಂಜಾಬ್ ಗಡಿಯ ಶಂಭು ಪ್ರದೇಶವನ್ನು ಬಂದ್ ಮಾಡಲಾಗಿದ್ದು, ಹಲವು ರೈತ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಗಡಿಯಲ್ಲಿ ಭಾರೀ ಭದ್ರತೆ

ಶಂಭು ಗಡಿಯಲ್ಲಿ ಅರೆಸೇನಾ ಪಡೆ ಸೇರಿದಂತೆ ಸುಮಾರು 15 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಲಾಗಿದೆ. ದೆಹಲಿಯತ್ತ ತೆರಳಲು ರೈತರು ಜಮಾಯಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಲವು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಘಗ್ಗರ್ ನದಿ ಸೇತುವೆ ಮೇಲೆ ಸಿಮೆಂಟ್ ತಡೆಗೋಡೆಗಳನ್ನು ನಿರ್ಮಿಸಿದ್ದಾರೆ.

ರೈತರ ದೆಹಲಿ ಚಲೋಗೆ ತಡೆ

ಪ್ರತಿಭಟನಾಕಾರರ ಸಂಚಾರ ನಿಯಂತ್ರಿಸಲು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ದೆಹಲಿ ಮತ್ತು ಪಂಜಾಬ್ ನಡುವೆ ಸಂಚರಿಸುವ ವಾಹನ ಸವಾರರಿಗೆ ಬೇರೆ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

ರೈತ ಸಂಘಟನೆಗಳ ಆಕ್ರೋಶ

ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕನ್ನು ಸರ್ಕಾರ ತಡೆಯುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಮಹಾಪಂಚಾಯತ್‌ನಲ್ಲಿ ಭಾಗವಹಿಸದಂತೆ ಹಲವು ರೈತ ನಾಯಕರು ಮತ್ತು ಕಾರ್ಯಕರ್ತರನ್ನು ಮುಂಚಿತವಾಗಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವ್ಯಾಪಾರ ಒಪ್ಪಂದಕ್ಕೆ ವಿರೋಧ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದವು ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಯುವಕರ ಹಿತಾಸಕ್ತಿಗೆ ಧಕ್ಕೆ ತರಬಹುದು ಎಂದು ರೈತ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಈ ಹೋರಾಟ ಕೇವಲ ರೈತರ ಸಮಸ್ಯೆಯಲ್ಲ, ದೇಶದ ಆರ್ಥಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್

0

ಹೊಸದಿಗಂತ ವರದಿ ಬೆಳಗಾವಿ:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ವೈದ್ಯಕೀಯ ಭದ್ರತೆ ಹಾಗೂ ವಿಐಪಿ ಶಿಷ್ಟಾಚಾರ ಪಾಲನೆಯಲ್ಲಿ ಗಂಭೀರ ಲೋಪಗಳು ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಜುಲೈ 9ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಆಗಮಿಸಿದ್ದ ವೇಳೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೈಗೊಳ್ಳಬೇಕಿದ್ದ ವೈದ್ಯಕೀಯ ಭದ್ರತಾ ಕ್ರಮಗಳಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ ಎಂದು ಪರಿಶೀಲನೆಯಲ್ಲಿ ತಿಳಿದುಬಂದಿದೆ.

ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿ ಪ್ರವಾಸದ ಸಂದರ್ಭದಲ್ಲಿ ಅತ್ಯಾಧುನಿಕ ಜೀವರಕ್ಷಕ ಉಪಕರಣಗಳನ್ನು ಹೊಂದಿರುವ ಎಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರ ತಂಡವನ್ನು ಕಡ್ಡಾಯವಾಗಿ ನಿಯೋಜಿಸಬೇಕಾಗಿತ್ತು. ಆದರೆ, ಸಾಮಾನ್ಯ ಅಂಬುಲೆನ್ಸ್‌ನ್ನು ಮಾತ್ರ ನಿಯೋಜಿಸಿರುವುದು ಮುಖ್ಯಮಂತ್ರಿಗಳ ಆರೋಗ್ಯ ಭದ್ರತೆಯಲ್ಲಿ ಗಂಭೀರ ನಿರ್ಲಕ್ಷ್ಯ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಮುಖ್ಯಮಂತ್ರಿ ತಂಗಿದ್ದ ಸ್ಥಳದಲ್ಲಿ ಹಿರಿಯ ತಜ್ಞ ವೈದ್ಯರನ್ನು ನಿಯೋಜಿಸುವ ಬದಲು ವೈದ್ಯಕೀಯ ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ ಮೂಲಕ ವಿಐಪಿ ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಪ್ರವಾಸದ ಅವಧಿಯಲ್ಲಿ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿರದೆ, ಜಿಲ್ಲಾಡಳಿತದೊಂದಿಗೆ ಸಮರ್ಪಕ ಸಮನ್ವಯ ಸಾಧಿಸದಿರುವುದೂ ಡಿಎಚ್‌ಒ ವಿರುದ್ಧದ ಪ್ರಮುಖ ಆರೋಪಗಳಲ್ಲಿ ಒಂದಾಗಿದೆ.
ಈ ಹಿನ್ನೆಲೆಯಲ್ಲಿ ಡಾ. ಈಶ್ವರ ಗಡಾದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್‌ಗೆ ಏಳು ದಿನಗಳೊಳಗೆ ಸಮರ್ಪಕ ಲಿಖಿತ ವಿವರಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಮರ್ಪಕ ಉತ್ತರ ನೀಡದಿದ್ದಲ್ಲಿ ಸೇವೆಯಿಂದ ಅಮಾನತು ಸೇರಿದಂತೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಐಸಿಸ್ ಉಗ್ರರಿಗೆ ಹಣಕಾಸು ನೆರವು? ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿಷೇಧಿತ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಂಗಳವಾರ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.

ಯುವಕರನ್ನು ಮೂಲಭೂತವಾದಕ್ಕೆ ಒಳಪಡಿಸುವ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿ ಹಲವು ಸ್ಥಳಗಳನ್ನು ಶೋಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಎಂಟು ಸ್ಥಳಗಳ ಮೇಲೆ ಕೇಂದ್ರ ತನಿಖಾ ಸಂಸ್ಥೆ ದಾಳಿ ನಡೆಸಿದ್ದು, ಅಕ್ರಮ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ನಿಬಂಧನೆಗಳ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇಕ್ರಾ ವೆಲ್ಫೇರ್ ಟ್ರಸ್ಟ್, ಗೈಡೆನ್ಸ್ ಫಾರ್ ಮ್ಯಾನ್‌ಕೈಂಡ್ ಮತ್ತು ಕೆಲವು ವ್ಯಕ್ತಿಗಳನ್ನು ಒಳಗೊಂಡ ಐಸಿಸ್ ನೇಮಕಾತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಖಲಿಸಿದ್ದ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಆಧರಿಸಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ಈ ಕಾರ್ಯಾಚರಣೆ ನಡೆಸಿದೆ.

ಆರೋಪಿಗಳು ಬೆಂಗಳೂರಿನ ಮುಸ್ಲಿಂ ಯುವಕರನ್ನು ಐಸಿಸ್ ಸಿದ್ಧಾಂತದತ್ತ ಆಕರ್ಷಿಸಲು ‘ಇಕ್ರಾ ಕ್ಯಾಂಪ್’ ಎಂಬ ವ್ಯಕ್ತಿತ್ವ ವಿಕಾಸ ಕಾರ್ಯಾಗಾರವನ್ನು ಆಯೋಜಿಸುತ್ತಿದ್ದರು. ಇದರ ಮೂಲಕ ಬೆಳೆದ ‘ಕುರ್‌ಆನ್ ಸರ್ಕಲ್’ ಎಂಬ ವಾರಾಂತ್ಯದ ಅಧ್ಯಯನ ಕೂಟಗಳ ಮೂಲಕ ಯುವಕರನ್ನು ಗುರುತಿಸಿ ಬ್ರೇನ್‌ವಾಶ್ ಮಾಡಲಾಗುತ್ತಿತ್ತು. ತಮ್ಮ ಸ್ವಂತ ಉಳಿತಾಯ, ಖಾಸಗಿ ವ್ಯಕ್ತಿಗಳು ಹಾಗೂ ‘ಇಕ್ರಾ ವೆಲ್ಫೇರ್ ಟ್ರಸ್ಟ್’ ಮತ್ತು ‘GFM ಟ್ರಸ್ಟ್’ ಗಳ ಮೂಲಕ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದರು. ಈ ಹಣವನ್ನು ಯುವಕರ ನೇಮಕಾತಿ ಮತ್ತು ಪ್ರಯಾಣದ ವೆಚ್ಚಕ್ಕೆ ಬಳಸಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !