ಹೊಸದಿಗಂತ ವರದಿ ಕಲಬುರಗಿ:
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುತ್ತಾರೆ.
ಕಲಬುರಗಿ ಜಿಲ್ಲೆಯಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿ ಭಯೋತ್ಪಾದಕರ ದಾಳಿಯಲ್ಲಿ ಸಿಲುಕಿಕೊಂಡಿದಲ್ಲಿ ಅಂತಹವರುಗಳ ಮಾಹಿತಿಯನ್ನು ಸಂಬಂಧಿಸಿದವರು ಕೂಡಲೆ ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08472-278677 ಹಾಗೂ ಪೊಲೀಸ್ ಕಂಟ್ರೋಲ್ ಸಂಖ್ಯೆ 9480805500, 9480803500, 08472-263604ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಡಿ.ಸಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.