ಪಹಲ್ಗಾಮ್‌ ದಾಳಿ: ಭಾರತದಲ್ಲಿ ಪಾಕಿಸ್ತಾನದ ಎಕ್ಸ್‌ ಖಾತೆ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಪಾಕ್‌ ವಿರುದ್ಧ ತಿರುಗಿಬಿದ್ದಿರುವ ಭಾರತ, ಪಾಕಿಸ್ತಾನ ಸರ್ಕಾರದ ಎಕ್ಸ್‌ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ.

ಬುಧವಾರ ನಡೆದ ಸಿಸಿಎಸ್ ಸಭೆಯಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ, ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಇದಾದ ಬಳಿಕ ಈಗ ಪಾಕ್‌ ಸರ್ಕಾರದ ಎಕ್ಸ್‌ ಖಾತೆಯನ್ನು ಭಾರತ ಸ್ಥಗಿತಗೊಳಿಸಿದೆ.

ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಇದರ ಅಡಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಸೂಚಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ನ್ನು  ತಕ್ಷಣದಿಂದ ಮುಚ್ಚಲು ಆದೇಶಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!