ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದಕ ದಾಳಿ ನಡೆದಿರುವ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನ್ನಡಗರೂ ಸಿಲುಕಿರುವ ಹಿನ್ನೆಲೆಯಲ್ಲಿ ಅವರ ರಕ್ಷಣೆಗಾಗಿ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಪೂರಕಾವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಉನ್ನತ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ.
ಕಣಿವೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಐವರು ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡ ಈಗಾಗಲೇ ಜಮ್ಮು ಕಾಶ್ಮೀರದ ಘಟನಾ ಸ್ಥಳಕ್ಕೆ ಧಾವಿಸಿದೆ. ಇದಲ್ಲದೆ ಅಲ್ಲಿನ ಪ್ರತೀ ಬೆಳವಣಿಗೆಗಳ ಮೇಲೆ ರಾಜ್ಯ ಸರ್ಕಾರ ನಿಗಾ ಇರಿಸಿದ್ದು, ದಿಲ್ಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಅಲ್ಲಿನ ಘಟನೆಯ ಆಗು ಹೋಗು ಕುರಿತು ಖುದ್ದು ನಿಗಾವಹಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡಿಗರ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯಲ್ಲೂ ಬದ್ಧ ಎಂದಿದ್ದಾರೆ.
I strongly condemn the heinous terror attack on tourists in Pahalgam, J&K. Kannadigas are among the victims of this shocking incident.
Upon receiving the news, I convened an emergency meeting and reviewed the situation with the Chief Secretary and senior police officials. I have…
— Siddaramaiah (@siddaramaiah) April 22, 2025