ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಮುಖಂಡ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತಂತೆ ಚರ್ಚೆ ನಡೆಸಿದ್ದಾರೆ.
ಉಗ್ರರ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಿದ ವೇಳೆ ಈ ಚರ್ಚೆ ನಡೆದಿದೆ.
ಘಟನೆ ಕುರಿತಂತೆ ಒಮರ್ ಅಬ್ದುಲ್ಲಾ ಅವರಿಂದ ಮಾಹಿತಿ ಪಡೆದುಕೊಂಡ ರಾಹುಲ್, ಸುಮಾರು 2 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು ಎಂದು ವರದಿಯಾಗಿದೆ.
ಒಮರ್ ಅಬ್ದುಲ್ಲಾ ಭೇಟಿಗೂ ಮುನ್ನ ರಾಹುಲ್ ಗಾಂಧಿ ಬಾದಾಮಿಬಾಗ್ ಕಂಟೋನ್ಮೆಂಟ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರಿಗೆ ಸಾಂತ್ವನ ಹೇಳಿದ್ದಾರೆ.