ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಲ್ಲಿ ನಡೆದ ಭಯೋತ್ಪಾದನೆ ದಾಳಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು. ಈ ಸಂಬಂಧ ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಪಹಲ್ಗಾಮ್ ದಾಳಿಗೆ ಪ್ರತಿ ದಾಳಿಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ಭದ್ರತೆ ಕುರಿತು ಮಹತ್ವದ ಸಭೆ ನಡೆಸಲಿದೆ. ಈ ಸಭೆಯಲ್ಲಿ ಮುಂದೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚೆ ಮಾಡಲಾಗುತ್ತದೆ.
ಇಂದು ನಡೆಯುವ ಸಭೆಯಲ್ಲಿ ತೆಗೆದುಕೊಳ್ಳುವ ಹಲವು ತೀರ್ಮಾನಗಳನ್ನು ಕೆಲವು ದಿನಗಳವರೆಗೂ ಕೇಂದ್ರ ಸರ್ಕಾರ ರಹಸ್ಯವಾಗಿ ಜಾರಿ ಮಾಡಲಾಗುತ್ತದೆ ಎನ್ನಲಾಗಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರದ ಕ್ಯಾಬಿನೆಟ್‌ನ ಭದ್ರತೆಯ ಉಪಸಮಿತಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.