ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಉಗ್ರ ದಾಳಿ ಕುರಿತು ಮಂಗಳವಾರ ಗೃಹ ಸಚಿವಾಲಯದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ರಾಷ್ಟ್ರೀಯ ಭದ್ರತಾ ಪಡೆ (NSG), ಗಡಿ ಭದ್ರತಾ ಪಡೆ (BSF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಸಶಸ್ತ್ರ ಸೀಮಾ ಬಲ್ (SSB) ಹಿರಿಯ ಅಧಿಕಾರಿಗಳು ಈ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದಾರೆ.
ಕೇಂದ್ರ ಸರ್ಕಾರ ಈಗಾಗಲೇ ಸಾಲು ಸಾಲು ಸಭೆಗಳನ್ನು ನಡೆಸುತ್ತಿದ್ದು, ಇಂದು ಕಾಶ್ಮೀರದ ಪ್ರಮುಖ ಭಾಗದಲ್ಲಿ ಸೇನಾ ಕಾರ್ಯಚರಣೆ ಕೂಡ ನಡೆಯುತ್ತಿದೆ.
ಇತ್ತ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆ ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪಹಲ್ಗಾಮ್ ದಾಳಿಯ ನಂತರ ಇದು ಮೊದಲ ಸಚಿವ ಸಂಪುಟ ಸಭೆಯಾಗಿದೆ.