ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಹಿಂದುಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಿದ್ದ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ.
ಒಟ್ಟು 26 ಮಂದಿಯನ್ನು ಹತ್ಯೆ ಮಾಡಲಾಗಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾಗಿರುವ 3 ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ.
ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ.