Friday, September 26, 2025

ಪಹಲ್ಗಾಮ್‌ ಸಂತ್ರಸ್ತರು, ಭಾರತೀಯ ಸೇನೆಗೆ ಗೆಲುವು ಅರ್ಪಣೆ ಎಂದ ಸೂರ್ಯಗೆ ದಂಡ 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ ದಾಳಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ ವಿರುದ್ಧ ಐಸಿಸಿ ಶಿಸ್ತು ಕ್ರಮಕೈಗೊಂಡಿದೆ.

ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ನೀಡಿದ ದೂರನ್ನು ಸ್ವೀಕರಿಸಿದ ಐಸಿಸಿ ಸೂರ್ಯಕುಮಾರ್‌ ಯಾದವ್‌ ಅವರ ವಿಚಾರಣೆ ನಡೆಸಿ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಿದೆ.

ವಿಚಾರಣೆ ಸಂದರ್ಭದಲ್ಲಿ ಸೂರ್ಯ ತನ್ನ ಮೇಲೆ ಬಂದ ಆರೋಪಕ್ಕೆ ತಪ್ಪೊಪ್ಪಿಕೊಂಡಿಲ್ಲ. ಮುಂದೆ ನಡೆಯವ ಫೈನಲ್‌ ಪಂದ್ಯದಲ್ಲಿ ರಾಜಕೀಯ ಎಂದು ಅರ್ಥೈಸಬಹುದಾದ ಯಾವುದೇ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. 

ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ನೀಡಿದ ದೂರನ್ನು ಸ್ವೀಕರಿಸಿದ ಐಸಿಸಿ ಸೂರ್ಯಕುಮಾರ್‌ ಯಾದವ್‌ ಅವರ ವಿಚಾರಣೆ ನಡೆಸಿತ್ತು. ಪಿಸಿಬಿ ಸಲ್ಲಿಸಿದ ಎಲ್ಲಾ ಪುರಾವೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಸೂರ್ಯಕುಮಾರ್ ಅವರ ಹೇಳಿಕೆಗಳು ಕ್ರೀಡಾ ಸ್ಪೂರ್ತಿಗೆ ವಿರುದ್ಧವಾಗಿದೆ. ಹೀಗಾಗಿ ಸೂರ್ಯಕುಮಾರ್‌ ವಿರುದ್ಧ ಆರೋಪ ಹೊರಿಸುವಂತೆ ಮ್ಯಾಚ್‌ ರೆಫ್ರೀ ರಿಚಿ ರಿಚರ್ಡ್ಸನ್ ತೀರ್ಮಾನಿಸಿದ್ದರು. 

ಇದನ್ನೂ ಓದಿ