ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ: ಮೂವರು ಮಕ್ಕಳು ಸಹಿತ 8 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನವು ಸೋಮವಾರ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಮೂವರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ತಾಲಿಬಾನ್‌ ಆಡಳಿತ ತಿಳಿಸಿದೆ.

ಅಫ್ಘಾನಿಸ್ತಾನದ ಪಕ್ತಿಕ ಮತ್ತು ಖೋಸ್ಟ್ ಪ್ರಾಂತ್ಯ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ವೈಮಾನಿಕ ದಾಳಿ ನಡೆದಿದೆ .

‘ಮುಂಜಾನೆ 3 ಗಂಟೆಯ ವೇಳೆಗೆ ಪಾಕಿಸ್ತಾನದ ಯುದ್ಧವಿಮಾನಗಳು ನಾಗರಿಕರ ಮನೆಗಳ ಮೇಲೆ ದಾಳಿ ನಡೆಸಿವೆ ಎಂದು ಅಫ್ಘಾನ್‌ ಸರ್ಕಾರದ ವಕ್ತಾರ ಝಬಿವುಲ್ಲ ಮುಜಾಹಿದ್‌ ಹೇಳಿಕೆ ನೀಡಿದ್ದಾರೆ’ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.

ಸಾಮಾನ್ಯ ಜನರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ಪಕ್ತಿಕದಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ. ಖೋಸ್ಟ್‌ನಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಪಾಕಿಸ್ತಾನದ ಉತ್ತರ ವಾಜಿರಿಸ್ತಾನ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಏಳು ಯೋಧರ ಸಾವಿಗೆ ಕಾರಣರಾದ ಭಯೋತ್ಪಾದಕರ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಪಾಕಿಸ್ತಾನ ಅಧ್ಯಕ್ಷ ಆಸೀಫ್‌ ಅಲಿ ಜರ್ದಾರಿ ಹೇಳಿಕೆ ನೀಡಿದ ಮರುದಿನವೇ ದಾಳಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!