Wednesday, June 29, 2022

Latest Posts

ಕುಲಭೂಷಣ್ ಜಾಧವ್ ಗೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡುವ ಮಸೂದೆಯನ್ನು ಅಂಗೀಕರಿಸಿದ ಪಾಕ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಮರಣದಂಡನೆ ಶಿಕ್ಷೆಗೆ ಗುರುಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡುವ ಸರ್ಕಾರಿ ಬೆಂಬಲಿತ ಮಸೂದೆಯನ್ನು ಅಂಗೀಕರಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ರಾಷ್ಟ್ರೀಯ ಅಸೆಂಬ್ಲಿ 2020 ರ ಐಸಿಜೆ (ವಿಮರ್ಶೆ ಮತ್ತು ಮರು-ಪರಿಗಣನೆ) ಮಸೂದೆಯನ್ನು ಗುರುವಾರ ಅಂಗೀಕರಿಸಿತು. ಭಾರತೀಯ ಗೂಢಚಾರ ಜಾಧವ್ ಅವರಿಗೆ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ತೀರ್ಪಿನ ಅನುಸಾರವಾಗಿ ಕಾನ್ಸುಲರ್ ನೆರವನ್ನು ಹೊಂದಲು ಅವಕಾಶವಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
51 ವರ್ಷದ ಧವ್ ಅವರಿಗೆ 2017 ರ ಏಪ್ರಿಲ್‌ನಲ್ಲಿ ಗೂಢಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಜಾಧವ್‌ಗೆ ಕಾನ್ಸುಲರ್ ಪ್ರವೇಶವನ್ನು ನಿರಾಕರಿಸಿದ್ದಕ್ಕಾಗಿ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಭಾರತ ಪಾಕಿಸ್ತಾನ ವಿರುದ್ಧ ಐಸಿಜೆಯನ್ನು ಸಂಪರ್ಕಿಸಿತ್ತು.
ಹೇಗ್ ಮೂಲದ ಐಸಿಜೆ ಜುಲೈ 2019 ರಲ್ಲಿ ತೀರ್ಪು ನೀಡಿ ಜಾಧವ್ ಅವರ ಶಿಕ್ಷೆ ಬಗ್ಗೆ ಪರಿಣಾಮಕಾರಿ ವಿಮರ್ಶೆ ಮತ್ತು ಮರುಪರಿಶೀಲನೆಯನ್ನು ಕೈಗೊಳ್ಳಬೇಕು ಮತ್ತು ಹೆಚ್ಚಿನ ವಿಳಂಬವಿಲ್ಲದೆ ಭಾರತಕ್ಕೆ ಕಾನ್ಸುಲರ್ ಪ್ರವೇಶವನ್ನು ನೀಡಬೇಕು ಎಂದು ಹೇಳಿದೆ.
ಮಸೂದೆ ಅಂಗೀಕಾರದ ನಂತರ ಮಾತನಾಡಿದ ಕಾನೂನು ಸಚಿವ ಫರೋಘ್ ನಾಸಿಮ್ ಅವರು, ಮಸೂದೆಯನ್ನು ಅಂಗೀಕರಿಸದಿದ್ದರೆ ಭಾರತವು ಯುಎನ್ ಸೆಕ್ಯುರಿಟಿ ಕೌನ್ಸಿಲ್ಗೆ ಹೋಗಬಹುದಿತ್ತು ಮತ್ತು ಐಸಿಜೆ ಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಕೇಳಬಹುದಿತ್ತು. ಐಸಿಜೆ ತೀರ್ಪಿನ ನಂತರ ಮಸೂದೆಯನ್ನು ಅಂಗೀಕರಿಸಲಾಗುತ್ತಿದೆ ಎಂದು ಹೇಳಿದರು.
ಜಾಧವ್ ಪ್ರಕರಣದಲ್ಲಿ ಐಸಿಜೆ ತೀರ್ಪಿನ ನಂತರ ಕಳೆದ ವರ್ಷ ಮೇ ತಿಂಗಳಲ್ಲಿ ಸುಗ್ರೀವಾಜ್ಞೆ ಪ್ರಕಟಿಸುವ ಮೂಲಕ ಸರ್ಕಾರ ಈಗಾಗಲೇ ಕಾನೂನನ್ನು ಜಾರಿಗೊಳಿಸಿತ್ತು.ಚುನಾವಣೆ (ತಿದ್ದುಪಡಿ) ಮಸೂದೆ ಸೇರಿದಂತೆ ಇತರ 20 ಮಸೂದೆಗಳನ್ನು ರಾಷ್ಟ್ರೀಯ ಅಸೆಂಬ್ಲಿ ಅಂಗೀಕರಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss