ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಸಹಕರಿಸುವಂತೆ ಭಾರತಕ್ಕೆ ಪಾಕ್ ಕೋರ್ಟ್ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಾಲಿಸ್ತಾನದಲ್ಲಿ ಮರಣದಂಡನೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಲಭೂಷಣ್ ಜಾಧವ್ ಅವರ ಕಾನೂನು ಪ್ರಕ್ರಿಯೆಗಳಿಗೆ ಸಹಕರಿಸುವಂತೆ ಭಾರತಕ್ಕೆ ಇಸ್ಲಾಮಾಬಾದ್ ಹೈಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಅಥರ್ ಮಿನಾಲಾ, ನ್ಯಾಯಮೂರ್ತಿ ಆಮರ್ ಫಾರೂಕ್ ಮತ್ತು ನ್ಯಾಯಮೂರ್ತಿ ಮಿಯಾಂಗುಲ್ ಹಸನ್ ಔರಂಗಜೇಬ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಜಾಧವ್ ಪರ ವಕೀಲರನ್ನು ನೇಮಕ ಕೋರಿ ಪಾಕಿಸ್ತಾನದ ಕಾನೂನು ಮತ್ತು ನ್ಯಾಯ ಸಚಿವಾಲಯದ ಅರ್ಜಿಯ ವಿಚಾರಣೆಯನ್ನು ಪುನರಾರಂಭಿಸಿದೆ.
ಕಳೆದ ವರ್ಷ ‌ಅಂತಾರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ನೀಡಿರುವ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಜಾಧವ್‌ಗೆ ಕಾನೂನುಬದ್ಧ ಪರಿಹಾರವನ್ನು ಪಡೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪಾಕಿಸ್ತಾನವು ಸುಗ್ರೀವಾಜ್ಞೆ ಹೊರಡಿಸಿತ್ತು ಎಂದು ಪಾಕಿಸ್ತಾನ ಅಟಾರ್ನಿ ಜನರಲ್‌ ಖಾಲೀದ್‌ ಜಾವೇದ್‌ ಖಾನ್‌ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಕುಲಭೂಷಣ್‌ ಜಾಧವ್‌ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಕ್ರಮಗಳಲ್ಲಿ ಭಾಗಿಯಾಗಲು ಭಾರತ ಸರ್ಕಾರ ಹಿಂದೇಟು ಹಾಕುತ್ತಿದೆ. ಪಾಕಿಸ್ತಾನದಲ್ಲಿ ವಿಚಾರಣೆಗೆ ಹಾಜರಾಗುವುದು ದೇಶದ ಸಾರ್ವಭೌಮತೆಯನ್ನು ತ್ಯಜಿಸುವುದಕ್ಕೆ ಸಮಾನವಾಗಿದೆ ಎಂಬ ಕಾರಣ ನೀಡಿರುವ ಭಾರತ, ಐಎಚ್‌ಸಿ ಪ್ರಕ್ರಿಯೆಗಳಿಗಾಗಿ ವಕೀಲರನ್ನು ನೇಮಕ ಮಾಡಲು ನಿರಾಕರಿಸಿದೆ ಎಂದು ಜಾವೇದ್‌ ಖಾನ್‌ ಪೀಠಕ್ಕೆ ತಿಳಿಸಿದ್ದಾರೆ.
ಈ ರೀತಿ ವಿರೋಧ ವ್ಯಕ್ತಪಡಿಸುವ ಮೂಲಕ ಭಾರತವು ಈ ಪ್ರಕರಣವನ್ನು ಐಸಿಜೆಗೆ ತೆಗೆದುಕೊಂಡು ಹೋಗಲು ಪ್ರಯತ್ನಿಸುತ್ತಿದೆ ಎಂದು ಅವರು ದೂರಿದ್ದಾರೆ.
ನಾವು ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿಲ್ಲ. ಆದರೆ ಐಸಿಜೆ ನಿರ್ಧಾರವನ್ನು ಪಾಲಿಸಲು ನಾವು ಯಾವ ರೀತಿಯ ಪ್ರಕ್ರಿಯೆಯನ್ನು ನಡೆಸಬೇಕು ಎಂಬುದನ್ನು ಭಾರತವೇ ಹೇಳಲಿ ಎಂದು ಹೇಳಿ, ಕೋರ್ಟ್ ವಿಚಾರಣೆಯನ್ನು ಜೂನ್‌ 15ಕ್ಕೆ ಮುಂದೂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss