ತವರಿನಲ್ಲಿ ಪಾಕ್ ಗೆ ಮುಖಭಂಗ: ಐತಿಹಾಸಿಕ ಟೆಸ್ಟ್​​ ಸರಣಿ ಗೆದ್ದ ಆಸ್ಟ್ರೇಲಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

24 ವರ್ಷಗಳ ನಂತರ ಪಾಕ್ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ತಂಡ ಸರಣಿಯಲ್ಲಿ ಗೆಲುವು ಸಾಧಿಸಿದ್ದು, ಅಂತಿಮ ಟೆಸ್ಟ್​​ ಪಂದ್ಯದಲ್ಲಿ 115ರನ್​ಗಳಿಂದ ಜಯ ಸಾಧಿಸುವ ಮೂಲಕ ಸರಣಿಯನ್ನು 1-0ರ ಅಂತರದಲ್ಲಿ ಕೈವಶ ಮಾಡಿಕೊಂಡಿದೆ.
ಮೂರನೇ ಟೆಸ್ಟ್​​ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​​ನಲ್ಲಿ 391ರನ್​ಗಳಿಕೆ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಪಾಕಿಸ್ತಾನ ತನ್ನೆಲ್ಲ ವಿಕೆಟ್ ಕಳೆದುಕೊಂಡು 268 ರನ್​ಗಳಿಕೆ ಮಾಡಿ 123ರನ್​ಗಳ ಹಿನ್ನಡೆ ಅನುಭವಿಸಿತ್ತು.
ಎರಡನೇ ಇನ್ನಿಂಗ್ಸ್​​​ನಲ್ಲಿ ಆಸ್ಟ್ರೇಲಿಯಾ 227ರನ್​ಗಳಿಕೆ ಮಾಡಿ ಡಿಕ್ಲೇರ್ ಘೋಷಣೆ ಮಾಡಿದೆ. ಜೊತೆಗೆ, ಪಾಕ್ ಗೆಲುವಿಗೆ 351ರನ್​ಗಳ ಗುರಿ ನೀಡಿತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕ್ ತಂಡ ಕೇವಲ 235ರನ್​ಗಳಿಗೆ ಆಲೌಟ್ ಆಗುವ ಮೂಲಕ 115ರನ್​ಗಳ ಸೋಲು ಕಂಡಿತು.
ಎರಡನೇ ಟೆಸ್ಟ್​​​ ಪಂದ್ಯದಲ್ಲಿ ಗೆಲ್ಲುವ ಅವಕಾಶ ಪಡೆದುಕೊಂಡಿದ್ದ ಆಸ್ಟ್ರೇಲಿಯಾ ತಂಡ ಫಾಲೋ ಆನ್ ಹೇರದೇ ತಪ್ಪು ಮಾಡಿದ್ದರಿಂದ ಗೆಲ್ಲುವ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಆದರೆ, ಮೂರನೇ ಟೆಸ್ಟ್​​ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಕಮ್ಮಿನ್ಸ್ ಪಡೆ ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!