ಆತ್ಮಾಹುತಿ ಬಾಂಬ್ ದಾಳಿ: 9 ಪಾಕ್ ಸೈನಿಕರು ಸಾವು, ಹಲವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಗುರುವಾರ ಸಂಜೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಒಂಬತ್ತು ಮಂದಿ ಭದ್ರತಾ ಸಿಬಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಟೆಲಿಗ್ರಾಫ್ ವರದಿ ಮಾಡಿದೆ.

ಮಾಲಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಮೋಟಾರು ಬೈಕ್‌ನಲ್ಲಿ ಬಂದಿದ್ದ ವ್ಯಕ್ತಿ ಆತ್ಮಾಹುತಿ ಬಾಂಬ್ ಸ್ಫೋಟಗೊಳಿಸಿದ್ದಾನೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಲ್ಲಿ ತಿಳಿಸಲಾಗಿದೆ.

ಒಂದು ತಿಂಗಳ ಅವಧಿಯಲ್ಲಿ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಜುಲೈ 30 ರಂದು, ರಾಜಕೀಯ ಪಕ್ಷದ ಸಭೆಯಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟಗೊಂಡ ನಂತರ ಕನಿಷ್ಠ 54 ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!