ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿದೆ. ಇದರ ನಡುವೆ ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮೊಹಮ್ಮದ್ ಅಸಿಮ್ ಮಲಿಕ್‌ನನ್ನು ದೇಶದ ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನನ್ನಾಗಿ ಪಾಕ್ ನೇಮಿಸಿದೆ.
ಸೆಪ್ಟೆಂಬರ್ 2024 ರಿಂದ ಮಲಿಕ್ ಐಎಸ್‌ಐ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಈ ಹುದ್ದೆಯ ಹೊರತಾಗಿಯೂ ರಾಷ್ಟ್ರೀಯ ಭದ್ರತಾ ಸಲಹೆಗಾರನನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.
ಐಎಸ್‌ಐ ಮಹಾನಿರ್ದೇಶಕನಾಗಿ ಸೇವೆ ಸಲ್ಲಿಸುವ ಮೊದಲು, ಮಲಿಕ್ ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿಯಲ್ಲಿ ಅಡ್ಜುಟಂಟ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ. ಕಾನೂನು ಮತ್ತು ಶಿಸ್ತಿನ ವಿಷಯಗಳನ್ನು ಒಳಗೊಂಡಂತೆ ಮಿಲಿಟರಿ ಆಡಳಿತ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.