ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಲಿಬಾನ್ ಅಡಗುತಾಣಗಳ ಮೇಲೆ ಪಾಕ್ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮೂರು ದಾಳಿಗಳು ನಡೆದಿದ್ದು, ಅಫ್ಘಾನಿಸ್ತಾನದ ಗಡಿಯಲ್ಲಿರುವ ತಾಲಿಬಾನ್ ಅಡಗುತಾಣಗಳನ್ನು ಗುರಿಯಾಗಿಸಿಕೊಂಡಿವೆ.
ಭಯೋತ್ಪಾದಕರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮರ್ದಾನ್ ಜಿಲ್ಲೆಯ ಕಟ್ಲಾಂಗ್ ಪರ್ವತ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪ್ರಾಂತೀಯ ಸರ್ಕಾರದ ವಕ್ತಾರ ಮುಹಮ್ಮದ್ ಅಲಿ ಸೈಫ್ ತಿಳಿಸಿದ್ದಾರೆ.