ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಪಾಕಿಸ್ತಾನಕ್ಕೆ ಅದರ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವುದಕ್ಕಾಗಿ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿಯಾಗಿಬಿಟ್ಟಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಟೀಕಿಸಿದೆ.
ಇತ್ತೀಚೆಗೆ, ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದರು. ಪಾಕಿಸ್ತಾನದ ಈ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಭಾರತ ನೇರವಾಗಿ ಪಾಕಿಸ್ತಾನವನ್ನು ಗುರಿಯಾಗಿಸಿದೆ. ತನ್ನ ವೈಫಲ್ಯಕ್ಕೆ ನೆರೆಹೊರೆಯವರನ್ನು ದೂಷಿಸುವುದು ಪಾಕಿಸ್ತಾನದ ಹಳೆಯ ಪದ್ಧತಿಯಾಗಿದೆ ಎಂದು ಟೀಕಿಸಿದರು.
ಇತ್ತೀಚೆಗಷ್ಟೇ ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ತನ್ನ ಆಂತರಿಕ ವೈಫಲ್ಯಗಳಿಗೆ ನೆರೆಹೊರೆಯವರನ್ನು ದೂಷಿಸುವುದು ಪಾಕಿಸ್ತಾನದ ಹಳೆಯ ಶೈಲಿಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, “ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವ ಅಫ್ಘಾನ್ ನಾಗರಿಕರ ಮೇಲಿನ ವೈಮಾನಿಕ ದಾಳಿಯ ಮಾಧ್ಯಮ ವರದಿಗಳನ್ನು ನಾವು ಗಮನಿಸಿದ್ದೇವೆ”. ಇದನ್ನು ಭಾರತ ಬಲವಾಗಿ ಖಂಡಿಸುತ್ತದೆ. ತನ್ನ ಆಂತರಿಕ ವೈಫಲ್ಯಗಳಿಗೆ ನೆರೆಹೊರೆಯವರನ್ನು ದೂಷಿಸುವುದು ಪಾಕಿಸ್ತಾನದ ಹಳೆಯ ಚಾಳಿಯಾಗಿದೆ. ಈ ನಿಟ್ಟಿನಲ್ಲಿ ಆಫ್ಘನ್ ವಕ್ತಾರರ ಪ್ರತಿಕ್ರಿಯೆಯನ್ನೂ ನಾವು ಗಮನಿಸಿದ್ದೇವೆ ಎಂದಿದ್ದಾರೆ.