ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಾವು ಪಾಕ್ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದೇವೆ. ಪಹಲ್ಗಾಮ್ ದಾಳಿ ಒಪ್ಪದ ಪಾಕ್ ನಮ್ಮ ಮೇಲೆ ದಾಳಿ ಮಾಡಬಹುದು. ಬಟ್ ಈ ರೀತಿ ದಾಳಿ ಮಾಡಿದ್ದೇ ಆದರೆ ಭಾರತದಿಂದ ಭೀಕರ ಮರುದಾಳಿ ಎದುರಿಸುತ್ತಾರೆ. ಇದರ ಪರಿಣಾಮ ನೆಟ್ಟಗಿರೋದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.
ಭಾರತವು ಉದ್ವಿಗ್ನತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿಲ್ಲ. ಆದರೆ, ಪಾಕಿಸ್ತಾನ ನಮ್ಮ ಮೇಲೆ ದಾಳಿ ಮಾಡಿದಲ್ಲಿ, ಅದಕ್ಕೆ ದುಪ್ಪಟ್ಟು ಪ್ರತೀಕಾರ ಮಾಡಬೇಕಾಗುತ್ತದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ಕ್ಷಿಪಣಿ ದಾಳಿಯ ಬಗ್ಗೆ ದೋವಲ್ ಅಮೆರಿಕ, ಇಂಗ್ಲೆಂಡ್, ಸೌದಿ ಅರೇಬಿಯಾ ಮತ್ತು ಜಪಾನ್‌ಗೆ ದಾಳಿಯ ಬಗ್ಗೆ ವಿವರಿಸಿದ್ದಾರೆ. ರಷ್ಯಾ ಮತ್ತು ಫ್ರಾನ್ಸ್‌ನ ರಕ್ಷಣಾ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದಿದ್ದಾರೆ.