ಹನಿ ಟ್ರ್ಯಾಪ್‌ ಬಲೆಗೆ ಬಿದ್ದ ಪಾಕ್ ನಾಯಕ ಬಾಬರ್ ಅಜಮ್: ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಲೀಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಾಕಿಸ್ತಾನದ ನಾಯಕ ಬಾಬರ್ ಅಜಮ್ (Babar Azam)ಗೆ ದೊಡ್ಡ ಸಂಕಷ್ಟ ಎದುರಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಅವರ ಕೆಲವು ಖಾಸಗಿ ವಿಡಿಯೋಗಳು ಮತ್ತು ಫೋಟೋಗಳು ಹರಿದಾಡುತ್ತಿದ್ದು, ಪಾಕ್ ನಾಯಕ ಹನಿ ಟ್ರ್ಯಾಪ್‌ (Honey Trap) ಬಲೆಗೆ ಬಿದ್ದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಈಗಾಗಲೇ ತವರಿನಲ್ಲಿ ಏಕದಿನ ಹಾಗೂ ಟೆಸ್ಟ್ ಸರಣಿ ಸೋತ ಬಳಿಕ ನಾಯಕತ್ವದ ಮೇಲೂ ಟೀಕೆ ವ್ಯಕ್ತವಾಗುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಹೊಸ ಅಧ್ಯಕ್ಷ ನಜಮ್ ಸೇಥಿ ಮತ್ತು ಮ್ಯಾನೇಜ್‌ಮೆಂಟ್ ಶೀಘ್ರದಲ್ಲೇ ಬಾಬರ್ ಅವರನ್ನು ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ತೆಗೆದುಹಾಕಲಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ. ಈ ನಡುವೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇದು ಬಾಬರ್ ಅಜಮ್ ಅವರದ್ದೇ ಎನ್ನಲಾದ ಕೆಲವು ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ವಿಡಿಯೋದಲ್ಲಿ ಪಾಕ್ ನಾಯಕನನ್ನೇ ಹೊಲುವ ವ್ಯಕ್ತಿಯೊಬ್ಬ ಹುಡುಗಿಯೊಬ್ಬಳೊಂದಿಗೆ ವಿಡಿಯೋ ಚಾಟ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ಬಾಬರ್ ಅಜಮ್ ಈ ಹಿಂದೆ ಹಮೀಜಾ ಮುಖ್ತಾರ್ ಎಂಬ ಮಹಿಳೆಗೆ ಕಿರುಕುಳ, ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವನ್ನು ಎದುರಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!