ಪಾಕಿಸ್ತಾನ ಹೋಲಿಕೆ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ಕಲಾಪದ ವೇಳೆ ನೀಡಿರುವ ಹೇಳಿಕೆಗಳಿಂದ ಯಾರಿಗಾದರೂ ನೋವಾಗಿದ್ದರೆ ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ವಿ ಶ್ರೀಶಾನಂದ ಶನಿವಾರ ಹೇಳಿದ್ದಾರೆ.

ಶ್ರೀಶಾನಂದ ಅವರು ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ಕೈಗೆತ್ತಿಕೊಂಡಿತ್ತು. ಜತೆಗೆ, ಆರೋಪ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ ಕೇಳಿತ್ತು. ಇದರ ಬೆನ್ನಲ್ಲೇ ಶ್ರೀಶಾನಂದ ತಮ್ಮ ಆಕ್ಷೇಪಾರ್ಹ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟಿನ 23ನೇ ವಿಚಾರಣಾ ಹಾಲ್​​ನಲ್ಲಿ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಇತರ ವಕೀಲರ ಎದುರು ಅವರು ತಮ್ಮ ಹೇಳಿಕೆಗಳಿಗೆ ವಿವರಣೆ ನೀಡಿದರು.

ಶ್ರೀಶಾನಂದ ತಮ್ಮ ಆಕ್ಷೇಪಾರ್ಹ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ ವೇಳೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್, ಖಜಾಂಚಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.

ಹೇಳಿದ್ದೇನು?
ಕಲಾಸಿಪಾಳ್ಯದ ಸುತ್ತಮುತ್ತ ನಡೆಯುವ ಬಡ್ಡಿ ದಂಧೆಯ ಬಗ್ಗೆ ವಿಚಾರಣೆ ವೇಳೆ, ‘ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್​​ ಮಾರುಕಟ್ಟೆ ಮತ್ತು ಗೌರಿ ಪಾಳ್ಯ ವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಂಥವನೇ ಸ್ಟ್ರಿಕ್ಟ್ ಅಧಿಕಾರಿಗಳನ್ನು ಅಲ್ಲಿಗೆ ಹಾಕಿ, ಹಿಡಿದರೆ ನೋಡ್ತೀನಿ’ ಎಂದು ಹೇಳಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!