ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಸ್ಥಾನದಿಂದ ಅನರ್ಹಗೊಳಿಸರುವ ಪಾಕಿಸ್ತಾನ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ್ದ ಮೇಲ್ಮನವಿಯನ್ನು ಪಾಕಿಸ್ತಾನ ನ್ಯಾಯಾಲಯವು ತಿರಸ್ಕರಿಸಿದೆ.
ಇಸ್ಲಾಮಾಬಾದ್‌ನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಅವರು ಇಮ್ರಾನ್ ಖಾನ್ ಅವರಿಗೆ ತಮ್ಮ ಮನವಿಯನ್ನು ಮರುಪರಿಶೀಲಿಸಲು ಮೂರು ದಿನಗಳ ಕಾಲಾವಕಾಶ ನೀಡಿದರು ಮತ್ತು ನಂತರ ಆದೇಶವನ್ನು ಅಮಾನತುಗೊಳಿಸಿದರು ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.
ಶುಕ್ರವಾರದ ತೀರ್ಪಿನ ನಂತರ ಆಯೋಗವು ಇನ್ನೂ ತನ್ನ ಪೂರ್ಣ ನಿರ್ಧಾರವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ ಇದು ಅನರ್ಹತೆಯ ಅವಧಿಯ ಬಗ್ಗೆ ಗೊಂದಲವನ್ನು ಉಂಟುಮಾಡುತ್ತದೆ ಎಂದು ಖಾನ್ ಅವರ ಪಕ್ಷದ ವಕ್ತಾರ ಫವಾದ್ ಚೌಧರಿ ಹೇಳಿದ್ದಾರೆ ಎನ್ನಲಾಗಿದೆ.
ಖಾನ್ ಅವರನ್ನು ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಭಾಗವಹಿಸಲು ಅನರ್ಹಗೊಳಿಸಲಾಗುವುದು ಎಂದು ಕಾನೂನು ಸಚಿವ ಅಜಮ್ ನಜೀರ್ ತರಾರ್ ಹೇಳಿದ್ದರೆ, ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಅನರ್ಹತೆಯು ಅವರ ಪ್ರಸ್ತುತ ಸಂಸತ್ತಿನ ಸ್ಥಾನವನ್ನೂ ಒಳಗೊಂಡಿದೆ ಎಂದು ಹೇಳಿದೆ.
ವಿವಿಧ ವಿದೇಶಿ ಗಣ್ಯರಿಂದ ಉಡುಗೊರೆಗಳನ್ನು ಮಾರಾಟ ಮಾಡಿ ಗಳಿಸಿದ ಹಣವನ್ನು ಬಹಿರಂಗಪಡಿಸದೆ ಖಾನ್ ಅವರು “ಭ್ರಷ್ಟ ಅಭ್ಯಾಸಗಳನ್ನು” ಎಸಗಿದ್ದಾರೆ ಎಂದು ಚುನಾವಣಾ ಆಯೋಗದ ಐದು ಸದಸ್ಯರ ಸಮಿತಿಯು ಶುಕ್ರವಾರ ಖಾನ್ ಅವರನ್ನು ಅಮಾನತ್ತು ಗೊಳಿಸಿದೆ.