ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಪಾಕ್ ಪ್ರತೀಕಾರದ ಭೀತಿ ನಡುವೆ ಭಾರತದಲ್ಲಿ IPL 2025 ಸ್ಥಗಿತಗೊಂಡರೆ, ಪಾಕಿಸ್ತಾನದಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ ರದ್ದಾಗಿದೆ.
ಪಾಕ್ ಕ್ರಿಕೆಟ್ ಮಂಡಳಿ ಪಿಎಸ್ಎಲ್ ಟೂರ್ನಿಯನ್ನು ಪೂರ್ಣಗೊಳಿಸಲು ಪರ್ಯಾಯ ಮಾರ್ಗಗಳತ್ತ ಮುಖ ಮಾಡಿತ್ತು. ಇದಕ್ಕಾಗಿಯೇ ಯುಎಇ ಕ್ರಿಕೆಟ್ ಬೋರ್ಡ್ ಜೊತೆ ಚರ್ಚೆ ನಡೆಸಿತ್ತು. ಆದರೆ ಪಾಕಿಸ್ತಾನ್ ಸೂಪರ್ ಲೀಗ್ ಅನ್ನು ಯುಎಇನಲ್ಲಿ ಆಯೋಜಿಸಲು ನಿರಾಕರಿಸಿದೆ.
ಪಾಕಿಸ್ತಾನ್ ಸೂಪರ್ ಲೀಗ್ಗೆ ನೋ ಎಂದಿರುವ ಯುಎಇ ಇದೀಗ ಭಾರತೀಯ ಕ್ರಿಕೆಟ್ ಮಂಡಳಿ ಜೊತೆ ಐಪಿಎಲ್ ಆಯೋಜನೆ ಬಗ್ಗೆ ಚರ್ಚೆ ನಡೆಸಿದೆ ಎಂದು ವರದಿಯಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜಿಸಲು ಯುಎಇ ಕ್ರಿಕೆಟ್ ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯುಎಇ ಕ್ರಿಕೆಟ್ ಬೋರ್ಡ್, ಇಂಡಿಯನ್ ಪ್ರೀಮಿಯರ್ ಲೀಗ್ನ ಉಳಿದ 16 ಪಂದ್ಯಗಳಿಗೆ ಆತಿಥ್ಯವಹಿಸಲು ಆಸಕ್ತಿ ತೋರಿದೆ ಎನ್ನಲಾಗಿದೆ. ಮಾತುಕತೆ ಮಾತ್ರ ನಡೆದಿದ್ದು, ಈ ಬಗ್ಗೆ ಬಿಸಿಸಿಐ ಯಾವುದೇ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಲಾಗಿದೆ.