February 15, 2026
Sunday, February 15, 2026
spot_img

ಭಾರತದ ಬೌಲಿಂಗ್ ದಾಳಿಗೆ ಪಾಕ್ ಧೂಳೀಪಟ: 114ಕ್ಕೆ ಆಲೌಟ್.. ಭಾರತಕ್ಕೆ ಭರ್ಜರಿ ಜಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ 61 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಸವಾಲು ಪಡೆದ ಭಾರತಕ್ಕೆ ಯುವ ಓಪನರ್ ಇಶಾನ್ ಕಿಶನ್ ಆಸರೆಯಾದರು. ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 175 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ದಾಖಲಿಸಿತು.

176 ರನ್‌ಗಳ ಬೆನ್ನಟ್ಟಿದ ಪಾಕಿಸ್ತಾನಕ್ಕೆ ಭಾರತದ ವೇಗಿಗಳು ಮತ್ತು ಸ್ಪಿನ್ನರ್‌ಗಳು ಆರಂಭದಿಂದಲೇ ಆಘಾತ ನೀಡಿದರು. ಭಾರತದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ವಿಫಲರಾದರು. ಅಂತಿಮವಾಗಿ ಪಾಕಿಸ್ತಾನ 114 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಪೂರ್ಣ 20 ಓವರ್‌ಗಳನ್ನು ಆಡುವಲ್ಲಿಯೂ ಸೋಲೊಪ್ಪಿಕೊಂಡಿತು.

ಈ ಮೂಲಕ ಕೊಲಂಬೊದ ಮೈದಾನದಲ್ಲಿ ಭಾರತವು ಐತಿಹಾಸಿಕ ವಿಜಯೋತ್ಸವ ಆಚರಿಸಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !