ಭಾರತದ ಬಗ್ಗೆ ಮಾತನಾಡುವ ಯೋಗ್ಯತೆ ಪಾಕಿಸ್ತಾನಕ್ಕಿಲ್ಲ: ಕಲಬುರಗಿಯಲ್ಲಿ ಭುಟ್ಟೊ ಪ್ರತಿಕೃತಿ ದಹನ!

ಹೊಸದಿಗಂತ ವರದಿ,ಕಲಬುರಗಿ:

 ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾಬಲ್ ಭುಟ್ಟೋ ಜರ್ದಾರಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕತ೯ರು ನಗರದ ಸದಾ೯ರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ದೇಶವನ್ನು ಸಮರ್ಥವಾಗಿ ನಡೆಸಿಕೊಂಡು ಹೋಗುತ್ತಿರುವ ಪ್ರಧಾನಿ ಮೋದಿ ಅವರಿಗೆ ಅವಹೇಳನಕಾರಿ ಮಾತನಾಡಿದ್ದು ಸಮಂಜಸವಲ್ಲ. ಮೋದಿ ಅವರನ್ನು ಆರ್.ಎಸ್.ಎಸ್.ಪ್ರಧಾನಿ ಮತ್ತು ಗುಜರಾತ್ ಕಟುಕ ಎಂದು ಭುಟ್ಟೋ ಜರೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ, ಭಾರತದ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಬಿಜೆಪಿ ನಾಯಕರು ಕಿಡಿ ಕಾರಿದರು.

ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ್, ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀ¯ ರದ್ದೇವಾಡಗಿ, ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!