ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸೇರಿದಂತೆ ಮೂವರ ಸೂಚನೆ ಮೇರೆಗೆ ಇಮ್ರಾನ್ ಕೊಲೆ ಯತ್ನ: ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಗುಂಡು ಹಾರಿಸಿ ದಾಳಿಯನ್ನು ದೇಶದ ಆಂತರಿಕ ಪ್ರಧಾನಿ ಶೆಹಬಾಜ್ ಷರೀಫ್ ಸೇರಿದಂತೆ ಮೂವರ ಸೂಚನೆಯ ಮೇರೆಗೆ ನಡೆಸಲಾಗಿದೆ ಎಂದು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಹಿರಿಯ ನಾಯಕರು ಆರೋಪಿಸಿದ್ದಾರೆ.
ಶೆಹಬಾಜ್ ಷರೀಫ್, ರಾಣಾ ಸನಾವುಲ್ಲಾ ಮತ್ತು ಮೇಜರ್ ಜನರಲ್ ಫೈಸಲ್ ಎಂಬ ಮೂರು ಜನರ ಆದೇಶದ ಮೇರೆಗೆ ಇದನ್ನು ಮಾಡಲಾಗಿದೆ ಎಂದು ಇಮ್ರಾನ್‌ ಸಹ ಅವರು ನಂಬುತ್ತಾರೆ. ನಾವು ಪಡೆದ ಮಾಹಿತಿ ಆಧಾರದ ಮೇಲೆ ಇದನ್ನು ಹೇಳುತ್ತಿದ್ದೇವೆ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕರಾದ ಅಸದ್ ಉಮರ್ ಮತ್ತು ಮಿಯಾನ್ ಅಸ್ಲಾಂ ಇಕ್ಬಾಲ್ ಹೇಳಿದ್ದಾರೆ.
ರಾಣಾ ಸನಾವುಲ್ಲಾ ಅವರು ಪಾಕಿಸ್ತಾನದ ಆಂತರಿಕ ಸಚಿವರಾಗಿದ್ದಾರೆ ಮತ್ತು ಮೇಜರ್ ಜನರಲ್ ಫೈಸಲ್ ನಸೀರ್ ಅವರು ಐಎಸ್ಐ ಮಹಾನಿರ್ದೇಶಕ (ಸಿ) ಆಗಿದ್ದಾರೆ. ಇಮ್ರಾನ್ ಖಾನ್ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪಿಟಿಐ ನಾಯಕರು ಹೇಳಿದ್ದಾರೆ.
ಪಕ್ಷವು ಪೋಸ್ಟ್ ಮಾಡಿದ ವಿಡಿಯೋದಲ್ಲಿ ಪಿಟಿಐ ಪ್ರಧಾನ ಕಾರ್ಯದರ್ಶಿಯಾಗಿರುವ ಅಸಾದ್ ಉಮರ್ ಅವರು ಶಂಕಿತ ಮೂವರನ್ನು ಹುದ್ದೆಗಳಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ನಾನು ಇಮ್ರಾನ್ ಖಾನ್ ಅವರೊಂದಿಗೆ ಮಾತನಾಡಿದೆ. ಆದರೆ, ಇದನ್ನು ನಾವು ಅಲ್ಲಾಗೆ ಬಿಡಬೇಕು ಎಂದು ಅವರು ಹೇಳಿದರು. ಈ ಮೂವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದು ಇಮ್ರಾನ್ ಖಾನ್ ಒತ್ತಾಯಿಸಿದ್ದಾರೆ. ಇಮ್ರಾನ್ ಖಾನ್ ಅವರ ಅನುಮತಿಗಾಗಿ ನಾವು ಕಾಯುತ್ತಿದ್ದೇವೆ. ಮೂವರನ್ನು ಹುದ್ದೆಯಿಂದ ತೆಗೆದುಹಾಕದಿದ್ದರೆ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ವಜೀರಾಬಾದ್‌ನಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ವಿರುದ್ಧ ಲಾಂಗ್ ಮಾರ್ಚ್‌ ನಡೆಸುತ್ತಿದ್ದಾಗ ಇಮ್ರಾನ್ ಖಾನ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ಇಮ್ರಾನ್ ಖಾನ್ ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!