ಬಲೂಚಿಸ್ತಾನದ ಮಸೀದಿ ಬಳಿ ಮಾಜಿ ಮುಖ್ಯ ನ್ಯಾಯಾಧೀಶರ ಹತ್ಯೆ: ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಮಸೀದಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಖರಾನ್ ಪ್ರದೇಶದ ಮಸೀದಿಯ ಹೊರಗೆ ʻಮುಹಮ್ಮದ್ ನೂರ್ ಮೆಸ್ಕಂಜೈʼ ಮೇಲೆ ದಾಳಿಕೋರರು ಗುಂಡು ಹಾರಿಸಿದ್ದಾರೆ, ಗಂಭೀರವಾಗಿ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಮಾಜಿ ಮುಖ್ಯ ನ್ಯಾಯಾಧೀಶರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾಗಿ ಪೊಲೀಸ್ ವರಿಷ್ಠಾಧಿಕಾರಿ ಆಸಿಫ್ ಹಲೀಮ್ ತಿಳಿಸಿದ್ದಾರೆ.

ಬಲೂಚಿಸ್ತಾನ್ ಮುಖ್ಯಮಂತ್ರಿ ಮೀರ್ ಅಬ್ದುಲ್ ಖುಡೂಸ್ ಬಿಜೆಂಜೊ ನ್ಯಾಯಾಧೀಶರ ಸಾವಿಗೆ ಸಂತಾಪ ಸೂಚಿಸಿದರು. ಅವರ ಸೇವೆಗಳು ಅವಿಸ್ಮರಣೀಯ, ಶತ್ರುಗಳ ಹೇಡಿತನದ ದಾಳಿಗಳು ದೇಶವನ್ನ ಬೆದರಿಸಲು ಸಾಧ್ಯವಿಲ್ಲ ಎಂದು ಬಿಜೆಂಜೊ ಹೇಳಿದರು.
ಮಸ್ಕಂಜೈ ಅವರು ಷರಿಯಾ ವಿರುದ್ಧ ರಿಬಾ ಆಧಾರಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಘೋಷಿಸುವ ಮಹತ್ವದ ತೀರ್ಪನ್ನು ನೀಡಿದ್ದರು. ಇವರ ಸಾವಿನಿಂದ ಪಾಕಿಸ್ತಾನದ ಪ್ರತಿಯೊಬ್ಬ ನಾಗರಿಕನು ತೀವ್ರ ದುಃಖಿತನಾಗಿದ್ದಾನೆ ಎಂದರು.

ನಾವು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಹಂತಕರನ್ನು ತಕ್ಷಣವೇ ಬಂಧಿಸಬೇಕು ಮತ್ತು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಅಲ್ಲಿನ ಪ್ರಜೆಗಳು ಒತ್ತಾಯಿಸಿದ್ದಾರೆ. ಪಾಕಿಸ್ತಾನದ ಕಾನೂನು ರಾಜ್ಯ ಸಚಿವ ಶಹದತ್ ಹುಸೇನ್ ಅವರು ಭಯೋತ್ಪಾದಕ ಚಟುವಟಿಕೆಗಳು ತೀವ್ರ ಹೆಚ್ಚಳಕ್ಕೆ ಇದು ಸಾಕ್ಷಿಯಾಗಿದೆ ಎಂದರು.

ಈ ವರ್ಷದ ಆಗಸ್ಟ್‌ಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ಭಯೋತ್ಪಾದಕ ದಾಳಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಫಾರ್ ಕಾನ್‌ಫ್ಲಿಕ್ಟ್ ಅಂಡ್ ಸೆಕ್ಯುರಿಟಿ ಸ್ಟಡೀಸ್ (ಪಿಐಸಿಎಸ್‌ಎಸ್) ಉಲ್ಲೇಖಿಸಿದೆ. ಸಪ್ಟೆಂಬರ್‌ನಲ್ಲಿ 42 ಉಗ್ರಗಾಮಿ ದಾಳಿಗಳು ನಡೆದಿದ್ದು, ಆಗಸ್ಟ್‌ಗೆ ಹೋಲಿಸಿದರೆ ಶೇ.35ರಷ್ಟು ಹೆಚ್ಚಳವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!