ಹೊಸದಿಗಂತ ಡಿಜಿಟಲ್ ಡೆಸ್ಕ್:
ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದೋಷಿ ಎಂದು ಪರಿಗಣಿಸಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಇಮ್ರಾನ್ ಖಾನ್‌ಗೆ ಸಂಸತ್ ಸ್ಥಾನದಿಂದ ಐದು ವರ್ಷಗಳ ಕಾಲ ಅನರ್ಹಗೊಳಿಸಿ ಪಾಕಿಸ್ತಾನದ ನ್ಯಾಯಾಲಯವು ಆದೇಶ ಹೊರಡಿಸಿದೆ.
ಪಾಕಿಸ್ತಾನದ ಸ್ಥಳೀಯ ಜಿಲ್ಲಾ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ನೀಡಿದ್ದು, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಕೂಡ ಆಗಿರುವ ಇಮ್ರಾನ್‌ಗೆ ಬಿಗ್ ಶಾಕ್ ನೀಡಿದೆ.
ನ್ಯಾಯಾಲಯವು ಇಮ್ರಾನ್ ಖಾನ್‌ಗೆ 3 ವರ್ಷ ಜೈಲು ವಾಸ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಅದಾಗ್ಯೂ ಇಸ್ಲಾಮಾಬಾದ್ ಪೊಲೀಸರು ಇಮ್ರಾನ್ ಖಾನ್ ಬಂಧನಕ್ಕೆ ವಾರೆಂಟ್ ಹೊರಡಿಸಿದ್ದಾರೆ.
ನ್ಯಾಯಾಲಯದ ತೀರ್ಪಿನಿಂದ ಇಮ್ರಾನ್ ಖಾನ್ ಮುಂದಿನ ಐದು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಕಳೆದುಕೊಂಡಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಅಧಿಕಾರದಲ್ಲಿದ್ದಾಗ ದುಬಾರಿ ಸರ್ಕಾರಿ ಉಡುಗೊರೆಗಳನ್ನು ಮಾರಾಟ ಮಾಡುವ ಮೂಲಕ ಲಾಭ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು.
ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ನ್ಯಾಯಾಲಯದ ತೀರ್ಪನ್ನು ಪಾಕಿಸ್ತಾನ ಹೈಕೋರ್ಟ್ ತಳ್ಳಿಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.