Monday, December 11, 2023

Latest Posts

ಜನವರಿ 2024 ರ ಕೊನೆಯ ವಾರದಲ್ಲಿ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ಜನವರಿ 2024 ರ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ (Pakistan) ಚುನಾವಣಾ ಆಯೋಗವು (Election commission) ಗುರುವಾರ ಹೇಳಿದೆ.

ಕ್ಷೇತ್ರಗಳ ವಿಂಗಡಣೆಯ (delimitation )ಕೆಲಸವನ್ನುಪರಿಶೀಲಿಸಿದ್ದು, ಕ್ಷೇತ್ರಗಳ ವಿಂಗಡಣೆಯ ಆರಂಭಿಕ ಪಟ್ಟಿಯನ್ನು ಸೆಪ್ಟೆಂಬರ್ 27 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಲಿಸಿದ ನಂತರ ನವೆಂಬರ್ 30 ರಂದು ಅಂತಿಮ ಪಟ್ಟಿಯನ್ನು ನೀಡಲಾಗುವುದು ಎಂದು ಹೇಳಿದೆ.2024ರ ಜನವರಿ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಆಗಸ್ಟ್ 9 ರಂದು ಅಕಾಲಿಕವಾಗಿ ವಿಸರ್ಜನೆಯಾದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ ನಂತರ 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.
ಆದಷ್ಟು ಬೇಗನೆ ಚುನಾವಣೆಗಳಿಗೆ ಒತ್ತಾಯಿಸಿದ ಹಲವಾರು ರಾಜಕೀಯ ಪಕ್ಷಗಳಿಂದ ಇಸಿಪಿ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಡಿಲಿಮಿಟೇಶನ್‌ನ ಅವಧಿಯನ್ನು ಕಡಿಮೆ ಮಾಡುವ ನಿರ್ಧಾರವು ಬಂದಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!