spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಾಕ್ ಪ್ರಧಾನಿ ಇಮ್ರಾನ್ ಖಾನ್ ರ ಅಧಿಕೃತ ನಿವಾಸ ಈಗ ಬಾಡಿಗೆಗೆ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ರ ಸರ್ಕಾರದ ಅಧಿಕೃತ ನಿವಾಸವನ್ನು ಇದೀಗ ಬಾಡಿಗೆಗೆ ನೀಡಲು ಸರ್ಕಾರ ಮುಂದಾಗಿದೆ.
2019ರಲ್ಲಿ ಸರ್ಕಾರಿ ಮನೆ ತೊರೆದು ಇಮ್ರಾನ್ ಖಾನ್ ಸ್ವಂತ ಮನೆಗೆ ಶಿಫ್ಟ್ ಆಗಿದ್ದರು. ಇದರ ಬಳಿಕ ಮನೆಯನ್ನು ಯೂನಿವರ್ಸಿಟಿಯನ್ನಾಗಿ ಮಾಡುವುದಾಗಿ ಘೋಷಿಸಿತ್ತು. ಆದರೆ ಈಗ ಹಣಕಾಸಿನ ತೊಂದರೆ ಉಂಟಾಗಿ ವಿಶ್ವ ವಿದ್ಯಾಲಯ ನಿರ್ಮಾಣ ಮಾಡಲಾಗದೆ, ಪ್ರಧಾನಿ ಮನೆಯನ್ನು ಬಾಡಿಗೆಗೆ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಯಾವುದೇ ಸಾಂಸ್ಕೃತಿಕ, ಫ್ಯಾಷನ್ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ ಬಾಡಿಗೆಗೆ ಸಿಗಲಿದೆ ಎಂದು ಕಾಲ್ ಫೆಡರಲ್ ಕ್ಯಾಬಿನೆಟ್ ಆದೇಶಿಸಿದೆ.
ಪ್ರಧಾನಿ ನಿವಾಸ ಮಾತ್ರವಲ್ಲದೆ, ಗರ್ವನರ್ ಕೂಡ ಅಧಿಕೃತ ನಿವಾಸ ತೊರೆಯಲಿದ್ದಾರೆ ಹಾಗಾಗಿ ಪ್ರಧಾನಿ ಅಧಿಕೃತ ನಿವಾಸವನ್ನು ಸ್ನಾತಕೋತ್ತರ ಸಂಸ್ಥೆಯನ್ನಾಗಿ ಪರಿವರ್ತಿಸುವುದಾಗಿ ಶಿಕ್ಷಣ ಸಚಿವ ಶಫ್‌ಖಾತ್ ಮೆಹಮ್ಮೂದ್ ಹೇಳಿದ್ದರು.
ಪ್ರಧಾನಿ ಇಮ್ರಾನ್ ಖಾನ್ ತಮ್ಮ ಅಧಿಕೃತ ನಿವಾಸದ ವಾರ್ಷಿಕ 470 ಮಿಲಿಯನ್ ನಿರ್ವಹಣೆ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲ ಎಂದು 2018ರಲ್ಲಿ ಮನೆಯನ್ನು ತೊರೆದಿದ್ದರು.
ಪ್ರಧಾನಿ ನಿವಾಸದಿಂದ ಬರುತ್ತಿದ್ದ ಆದಾಯವೂ ನಿಂತು ಹೋಯಿತು. ಕಳೆದೊಂದು ವರ್ಷದಿಂದ ಪ್ರಧಾನಿ ನಿವಾಸದಲ್ಲಿ ಯಾವ ಸಮಾರಂಭ ನಡೆದಿಲ್ಲ ಎಂದು ಪಾಕಿಸ್ತಾನ ಮೂಲಗಳು ತಿಳಿಸಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss