ಪಾಕಿಸ್ತಾನದ ಬಳಿ ಅಣು ಬಾಂಬ್‌ ಇದೆ ಆದ್ರೆ ನಿರ್ವಹಿಸಲು ದುಡ್ಡಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಬಳಿ ಅಣು ಬಾಂಬ್‌ ಇವೆ ಎಂಬುದಾಗಿ ಕಾಂಗ್ರೆಸ್‌ ಹೇಳುತ್ತದೆ. ಆದರೆ, ಅವುಗಳನ್ನು ನಿರ್ವಹಣೆ ಮಾಡುವಷ್ಟು ಹಣವೇ ಪಾಕಿಸ್ತಾನದ ಬಳಿ ಇಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮೋದಿ ಮಾತನಾಡಿ, ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ನಾಯಕರನ್ನು ಜನ ಯಾವುದೇ ಕಾರಣಕ್ಕೂ ನಂಬಬಾರದು. ಅವರು ವೋಟ್‌ ಜಿಹಾದ್‌ಗೆ ಕರೆ ನೀಡುತ್ತಾರೆ. ಸಮಾಜವನ್ನು ಒಡೆಯುವುದು ಅವರ ಉದ್ದೇಶವಾಗಿದೆ. ಮಾಫಿಯಾವನ್ನು ಸಮಾಜವಾದಿ ಪಕ್ಷವು ಈಗಲೂ ಬೆಂಬಲಿಸುತ್ತದೆ. ಇನ್ನು, ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡುತ್ತಲೇ ಬಂದಿತು. ಆದರೆ, ಕಾಂಗ್ರೆಸ್‌ ದಾಳಿ ಮಾಡಿದವರಿಗೇ ಕ್ಲೀನ್‌ಚಿಟ್‌ ನೀಡುವ ಮೂಲಕ ತನ್ನ ನಿಲುವು ಯಾರ ಪರ ಎಂಬುದನ್ನು ಸಾಬೀತುಪಡಿಸಿತು ಎಂದು ಮೋದಿ ಹೇಳಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?
ಈ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್‌ (Mani Shankar Aiyar) , ಪಾಕಿಸ್ತಾನವು ಸಹ ಅಣುಬಾಂಬ್‌ಗಳನ್ನ (Nuclear Bombs) ಹೊಂದಿದೆ. ನಮ್ಮ ಸರ್ಕಾರ ಅವರನ್ನ ಕೆರಳಿಸಿದರೆ, ಭಾರತದ ಮೇಲೆ ಎಸೆಯಬಹುದು. ಆದ್ದರಿಂದ ಭಾರತವು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು, ಇಲ್ಲದಿದ್ದರೆ ದೇಶವು ಭಾರೀ ಬೆಲೆ ತೆರಬೇಕಾಗುತ್ತದೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಹಳೆಯ ವೀಡಿಯೋ ಆಗಿದ್ದು, ಇತ್ತೀಚೆಗೆ ಭಾರೀ ವೈರಲ್‌ ಆಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!