ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ತ ಭಾರತ ಮತ್ತು ಪಾಕಿಸ್ತಾನದ ನಡುವೆ ವೈಮಾನಿಕ ದಾಳಿ ನಡೆಯುತ್ತಿದ್ದರೆ ಇತ್ತ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ಪರಿಹರಿಸಲು ಒತ್ತಾಯಿಸುತ್ತಿದ್ದಾರೆ.
ಎರಡೂ ದೇಶಗಳು ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಶಾಂತಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವತ್ತ ಯೋಚಿಸಬೇಕು. ಇಲ್ಲದಿದ್ದರೆ ಅನ್ಯಾಯವಾಗಿ ಮಹಿಳೆಯರು, ಮಕ್ಕಳು, ವೃದ್ಧರು, ಅಮಾಯಕರು ಜೀವ ಕಳೆದುಕೊಳ್ಳಬೇಕಾಗುತ್ತದೆ. ಈ ಗುಂಡಿನ ಚಕಮಕಿಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಇದರಲ್ಲಿ ಅವರ ತಪ್ಪೇನು? ಮಿಲಿಟರಿ ಕಾರ್ಯಾಚರಣೆಯು ಎಂದಿಗೂ ಪರಿಹಾರ ಅಥವಾ ಶಾಂತಿಯನ್ನು ಒದಗಿಸುವುದಿಲ್ಲ ಎಂದು ಹೇಳಿದ್ದಾರೆ.