ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಎಂಎಫ್ ನೀಡಿರುವ ಸಾಲವನ್ನು ಪಾಕಿಸ್ತಾನ ಪರೋಕ್ಷವಾಗಿ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ಭಾರತೀಯ ವಾಯುಪಡೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಿಕ್ಷೆ ಬೇಡುತ್ತಿದ್ದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯು ವಿಸ್ತೃತ ನಿಧಿ ಸೌಲಭ್ಯದಡಿಯಲ್ಲಿ ಎರಡು ಕಂತುಗಳಲ್ಲಿ 2.1 ಬಿಲಿಯನ್ ಡಾಲರ್‌ಗಳನ್ನು ವಿತರಿಸಿದೆ. ಇದನ್ನು ಪಾಕಿಸ್ತಾನ ಪರೋಕ್ಷವಾಗಿ ಭಯೋತ್ಪಾದನೆಗೆ ನೀಡುತ್ತಿದೆ. ಹೀಗಾಗಿ ನೀಡಿರುವ ಸಾಲವನ್ನು ಐಎಂಎಫ್ ಮರುಪರಿಶೀಲಿಸಬೇಕೆಂದು ಆಗ್ರಹಿಸಿದ್ದಾರೆ.
ಪಾಕ್ ಹಣವನ್ನು ಭಯೋತ್ಪಾದಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಬಳಕೆ ಮಾಡುತ್ತಿದೆ. ಈಗಾಗಲೇ ಮೋಸ್ಟ್ ವಾಂಟೆಡ್ ಉಗ್ರ ಮಸೂದ್‌ಗೆ ಪಾಕಿಸ್ತಾನ 14 ಕೋಟಿ ರೂ. ಪರಿಹಾರ ನೀಡಿದೆ ಎಂದು ಕಿಡಿಕಾರಿದ್ದಾರೆ.