ಪಾಕಿಸ್ತಾನ ಕೈಗೆ ಬಳೆ ತೊಟ್ಟಿಕೊಂಡಿಲ್ಲ: ಫಾರೂಕ್‌ ಅಬ್ದುಲ್ಲಾ ವಿವಾದಾತ್ಮಕ ಹೇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಾಕ್ ಆಕ್ರಮಿತ ಕಾಶ್ಮೀರವನ್ನು (POK) ಭಾರತದೊಂದಿಗೆ ವಿಲೀನಗೊಳಿಸುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಅವರ ಹೇಳಿಕೆಗೆ ಪ್ರತಿಕ್ರಿಯಿಸುವ ಭರದಲ್ಲಿ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ (Farooq Abdullah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನ ಕೈಗೆ ಬಳೆ ತೊಟ್ಟಿಕೊಂಡಿಲ್ಲ. ಭಾರತದ ವಿರುದ್ಧ ಬಳಸಬಹುದಾದ ಪರಮಾಣು ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನ (Pakistan) ಹೊಂದಿದೆ ಎಂದು ಹೇಳಿಕೆ ನೀಡಿದ್ದಾರೆ.

ರಕ್ಷಣಾ ಸಚಿವರು ಹೇಳುತ್ತಿದ್ದರೆ, ಮುಂದುವರಿಯಿರಿ, ನಾವು ತಡೆಯಲು ಯಾರು? ಆದರೆ ನೆನಪಿಡಿ, ಪಾಕಿಸ್ತಾನ ಬಳೆಗಳನ್ನು ಧರಿಸಿಲ್ಲ ಎಂದಿದ್ದಾರೆ.

ಪಿಓಕೆ ವಶಪಡಿಸಿಕೊಳ್ಳಲು ಸೇನಾ ಬಲ ಪ್ರಯೋಗಿಸುವ ಅಗತ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಅಭಿವೃದ್ಧಿಗಳನ್ನು ಕಂಡು ಅಲ್ಲಿನ ಜನರೇ ಭಾರತದ ಭಾಗವಾಗಲು ಬಯಸುತ್ತಾರೆ. ನನ್ನ ಪ್ರಕಾರ, ಭಾರತ ಏನೂ ಮಾಡುವುದು ಬೇಕಿಲ್ಲ ಎಂದು ಸಂದರ್ಶನವೊಂದರಲ್ಲಿ ರಾಜನಾಥ್ ಸಿಂಗ್ ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!