Sunday, December 3, 2023

Latest Posts

ಉತ್ತರ ಪ್ರದೇಶದಲ್ಲಿ ಮತ್ತೆ ಮೊಳಗಿದ ಪಾಕಿಸ್ಥಾನ ಜಿಂದಾಬಾದ್:‌ ಅಂಗಡಿಕಾರನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉತ್ತರ ಪ್ರದೇಶದ ಬರೇಲಿಯ ಅಂಗಡಿಯೊಂದರಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂಬ ಘೋಷಣೆ ಕೂಗುವ ಹಾಡುಕೇಳುತ್ತಿರುವ ವಿಡಿಯೋ ವೈರಲ್‌ ಆಗಿದ್ದು ಅಂಗಡಿಕಾರನೊಬ್ಬನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಉತ್ತರಪ್ರದೇಶದ ಬರೇಲಿಯ ಭೂತಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಘೈ ಕಾಲಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದ್ದು ಬುಧವಾರ ತಡರಾತ್ರಿ ತಮ್ಮ ಅಂಗಡಿಯಲ್ಲಿ ದೇಶವಿರೋಧಿ ಘೋಷಣೆಗಳನ್ನು ಕೇಳಿದ ಅಂಗಡಿಯವ ಹಾಗೂ ಆತನ ಸಹೋದ್ಯೋಗಿಯ ವೀಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

ಹಾಡುವುದನ್ನು ನಿಲ್ಲಿಸು ಎಂದಾಗ ಅಂಗಡಿಕಾರ ನಿರಾಕರಿಸಿದ್ದಲ್ಲದೇ ಹಾಡಿನ ಧ್ವನಿ ಎತ್ತರಿಸಿ ಧಿಮಾಕು ತೋರಿದ್ದಾನೆ ಎಂದು ವರದಿಗಳು ಹೇಳುತ್ತಿವೆ.
ಘಟನೆ ಬೆಳಕಿಗೆ ಬಂದ ನಂತರ ರಾಜ್ಯದ ಬಿಜೆಪಿ ನಾಯಕರಾದ ಹಿಮಾಂಶು ಪಟೇಲ್ ಮತ್ತು ಆಶಿಶ್ ಪಟೇಲ್ ಭೂತಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬರೇಲಿಯಲ್ಲಿ ದೇಶವಿರೋಧಿ ಘೋಷಣೆಗಳನ್ನು ಕೂಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಹಫೀಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ರಿಥೋರಾದಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಇಂತಹ ಘಟನೆಗಳಲ್ಲಿ ಪೊಲೀಸರ ಕ್ರಮ ವಿಳಂಬವಾಗುತ್ತಿರುವುದನ್ನು ಜನರು ಪ್ರಶ್ನಿಸುತ್ತಿದ್ದಾರೆ.

ಘಟನೆಯ ಕುರಿತು ಎಸ್ಪಿ ರಾಜ್‌ಕುಮಾರ್ ಅಗರ್ವಾಲ್ “ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಎಲ್ಲಾ ಪುರಾವೆಗಳನ್ನು ನೋಡಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಆರೋಪಿಗಳನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ” ಎಂದು ಹೇಳಿದ್ದಾರೆ.

ಇಂತಹ ಘಟನೆಗಳು ಆಗಾಗ ನಡೆಯುತ್ತಿರುವುದರಿಂದ ಸಾಮಾಜಿಕ ಸಾಮರಸ್ಯ ಹದಗೆಡುತ್ತಿದೆ ಎಂದು ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!