ದೆಹಲಿ-ನೋಯ್ಡಾ ಮಾತ್ರವಲ್ಲ, ಪಾಕಿಸ್ತಾನಕ್ಕೂ ವಕ್ಕರಿಸಿದ ಮಾಲಿನ್ಯ ಭೂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದಲ್ಲಿ ಮಾತ್ರವಲ್ಲದೆ ನೆರೆಯ ಪಾಕಿಸ್ತಾನದಲ್ಲೂ ಮಾಲಿನ್ಯ ಪಡೆಂಭೂತವಾಗಿ ಕಾಡುತ್ತಿದೆ. ಪಾಕಿಸ್ತಾನದ ಲಾಹೋರ್ ನಗರದಲ್ಲಿ ಸರ್ಕಾರ ತುರ್ತು ಪರಿಸ್ಥಿತಿ ಹೇರಬೇಕಾದ ಪರಿಸ್ಥಿತಿ ಎದುರಾಗಿದೆ. ಲಾಹೋರ್ ಹೈಕೋರ್ಟ್‌ ತರಾಟೆಗೆ ತೆಗದುಕೊಂಡ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಹಾಕಿದೆ.

ಹೊಗೆಗೆ ಕಾರಣವಾದ ಕಾರ್ಖಾನೆಗಳನ್ನು ಮತ್ತೆ ತೆರೆಯದಂತೆ ನ್ಯಾಯಾಲಯವು ಸರ್ಕಾರಕ್ಕೆ ಆದೇಶಿಸಿದೆ. ಇದಲ್ಲದೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಇಂತಹ ಕಾರ್ಖಾನೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಕಮಿಷನರ್ ಸೇರಿದಂತೆ ಎಲ್ಲ ಅಧಿಕಾರಿಗಳು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಪ್ರಸ್ತುತ ಪರಿಸ್ಥಿತಿಗಾಗಿ ಹೈಕೋರ್ಟ್ ನ್ಯಾಯಾಧೀಶ ಶಾಹಿದ್ ಕರೀಮ್ ಲಾಹೋರ್, ಕಮಿಷನರ್ ಮೊಹಮ್ಮದ್ ಅಲಿ ರಾಂಧವಾ ಅವರನ್ನು ತೀವ್ರವಾಗಿ ತರಾಟೆಗೆ ತೆಗದುಕೊಂಡಿದ್ದಾರೆ. ನೀವು ನಗರದ ಆಡಳಿತಾಧಿಕಾರಿಯಾಗಿ, ನೀವೇನು ಮಾಡಿದ್ದೀರಿ ನೋಡಿ ಎಂದು ಆಯುಕ್ತರನ್ನು ಪ್ರಶ್ನಿಸಿದರು. ಮಂಜಿನಿಂದಾಗಿ ಲಾಹೋರ್ ವಿಷಪೂರಿತ ಗ್ಯಾಸ್ ಚೇಂಬರ್ ಆಗಿ ಮಾರ್ಪಟ್ಟಿದ್ದು, ಪರಿಸ್ಥಿತಿ ಹದಗೆಡುತ್ತಿದೆ. ಜನರು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್ (AQI)ನಲ್ಲಿ 255ರಷ್ಟು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!