ತವರಿನಲ್ಲಿ ಸೋತ ಪಾಕ್: ಇಂಗ್ಲೆಂಡ್‌ ಗೆ ಗೆಲುವಿನ ಸಂಭ್ರಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

17 ವರ್ಷದ ಬಳಿಕ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್‌ ತಂಡ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವಿರುದ್ಧ 74 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್‌ ತಂಡ 1-0 ಮುನ್ನಡೆಯನ್ನು ಪಡೆದುಕೊಂಡಿತು.
ಪಾಕ್ ನ ರಾವಲ್ಪಿಂಡಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಪ್ರವಾಸಿ ತಂಡ ಮೊದಲ ಇನಿಂಗ್ಸ್‌ನಲ್ಲಿ 657 ರನ್ ಬಾರಿಸಿ, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ನಷ್ಟಕ್ಕೆ 264 ರನ್‌ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.
343 ರನ್‌ಗಳ ಗೆಲುವಿನ ಗುರಿಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಪಾಕಿಸ್ತಾನ ತಂಡ 268 ರನ್‌ಗಳಿಗೆ ಆಲ್‌ಔಟ್‌ ಆಗುವ ಮೂಲಕ ಸೋಲೊಪ್ಪಿಕೊಂಡಿತ್ತು. ಪಾಕಿಸ್ತಾನ ತಂಡವೂ ಮೊದಲ ಇನಿಂಗ್ಸ್‌ನಲ್ಲಿ 579 ರನ್‌ ಬಾರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!