ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಗೆ ಪಾಕಿಸ್ತಾನ ಶತ್ರುದೇಶ ಆಗಿರಬಹುದು, ಆದರೆ ಕಾಂಗ್ರೆಸಿಗರಿಗೆ ಅದೊಂದು ನೆರೆಯ ರಾಷ್ಟ್ರ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಕಲಾಪದಲ್ಲಿ ಪಾಕಿಸ್ತಾನ ಪರ ಘೋಷಣೆ ವಿಷಯವಾಗಿ ಮಾತನಾಡುತ್ತ ಪಾಕಿಸ್ತಾನ ಬಿಜೆಪಿಗೆ ಶತ್ರು ನಮಗಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಭಾರೀ ವಿವಾದಕ್ಕೆ ಈಡಾಗಿದೆ.
ಸೋಮವಾರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ನಾಸಿರ್ ಹುಸೇನ್ ಗೆದ್ದ ನಂತರ ಕಾರ್ಯಕರ್ತರಲ್ಲಿ ಒಬ್ಬಾತ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದ.
ಆತನನ್ನು ಬಂಧಿಸುವಂತ ಬಿಜೆಪಿ ಆಗ್ರಹಿಸಿದ್ದು, ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ.