ಭುಟ್ಟೋ ಹೇಳಿಕೆ ಬೆನ್ನಲ್ಲೇ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ ಪಾಕಿಸ್ತಾನ ಸಚಿವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ವ್ಯಾಪಕವಾಗಿ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಮತ್ತೋರ್ವ ಸಚಿವೆ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ನಾಯಕಿ ಶಾಜಿಯಾ ಮಾರಿ, “ಪಾಕಿಸ್ತಾನಕ್ಕೆ ಹೇಗೆ ಉತ್ತರಿಸಬೇಕೆಂದು ತಿಳಿದಿದೆ. ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಅಲ್ಲ. ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ” ಎಂದು ಹೇಳಿದ್ದಾರೆ.

ಕಪಾಳಮೋಕ್ಷ ಮಾಡಿದರೆ ದೇಶ ಸುಮ್ಮನಿರುವುದಿಲ್ಲ. ಪಾಕಿಸ್ತಾನವು ಸಮಾನ ತೀವ್ರತೆಯಿಂದ ಪ್ರತಿಕ್ರಿಯಿಸುತ್ತದೆ ಎಂದು ಪಾಕಿಸ್ತಾನ ಸಚಿವೆ ಶಾಜಿಯಾ ಮಾರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾರಿ, “ಭಾರತದ ಪ್ರಧಾನಿ ದೇಶದಲ್ಲಿ ದ್ವೇಷವನ್ನು ಮಾತ್ರ ಹರಡುತ್ತಿದ್ದಾರೆ. ಮೋದಿ ಸರ್ಕಾರದ ಅಡಿಯಲ್ಲಿ ಹಿಂದುತ್ವ ಮಾತ್ರ ಬೆಳೆದಿದೆ” ಎಂದಿದ್ದಾರೆ. ಅಲ್ಲದೇ “ಭಾರತವು ಮುಸ್ಲಿಮರನ್ನು ಭಯೋತ್ಪಾದನೆಯೊಂದಿಗೆ ಜೋಡಿಸುತ್ತಿದೆ” ಎನ್ನುವ ಮೂಲ ಜೈಶಂಕರ್‌ ಅವರ ವಿರುದ್ಧವೂ ಆರೋಪ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!